ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ ಇದರ ಆಶ್ರಯದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಂಗಳೂರು, ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು, ಬಂಟರ ಸಂಘ ಬೆಂಗಳೂರು ಇವುಗಳ ಸಹಭಾಗಿತ್ವದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣಾ ಸಮಾರಂಭ ಆ. 6 ರಂದು ಬಂಟರ ಭವನ ಗುರುವಾಯನಕೆರೆಯಲ್ಲಿ ಜರಗಿತು.
ಅಧ್ಯಕ್ಷತೆಯನ್ನು ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷ ಜಯರಾಮ್ ಶೆಟ್ಟಿ ಮುಂಡಾಡಿ ಗುತ್ತು ವಹಿಸಿದರು. ನಿಕಟಪೂರ್ವ ಲಯನ್ಸ್ ಜಿಲ್ಲಾ ಗವರ್ನರ್ ಸಂಜೀತ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮಾತನಾಡಿ ಯಾವಾಗಲೂ ಉದ್ಯೋಗಿಗಳಾಗದೆ ಉದ್ಯೋಗ ಕೊಡುವಂತವರು ಆಗಬೇಕು. ಉತ್ತಮ ಸಮಾಜ ನಿರೂಪಿಸಬೇಕು ಎಂದರು.
ಈ ಸಂದರ್ಭದಲ್ಲಿ ಮಂಗಳೂರು ಮಾತೃ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಹಾಗೂ ಬೆಳ್ತಂಗಡಿ ಬಂಟರ ಸಂಘದ ಮಾಜಿ ಅಧ್ಯಕ್ಷ ಜಯರಾಮ್ ಭಂಡಾರಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನಿರ್ದೇಶಕ ಜಯಂತ್ ಶೆಟ್ಟಿ, ಉಜಿರೆ ಎಸ್ ಡಿ ಎಮ್ ಕಾಲೇಜ್ ಪ್ರಾಂಶುಪಾಲ ಡಾ. ಬಿ ಎ ಕುಮಾರ್, ಸಂಚಾಲಕರಾದ ವಿಠಲ್ ಶೆಟ್ಟಿ, ಕಾರ್ಯದರ್ಶಿ ಸಂಜೀವ ಶೆಟ್ಟಿ, ಕೋಶಾಧಿಕಾರಿ ಕೆಎನ್ ಆನಂದ ಶೆಟ್ಟಿ, ಜೊತೆ ಕಾರ್ಯದರ್ಶಿ ಸುರೇಶ್ ಶೆಟ್ಟಿ ಲಾಯಿಲ, ಬಂಟರ ಯುವ ವಿಭಾಗದ ಅಧ್ಯಕ್ಷರಾದ ಸುಜಯ್ ಶೆಟ್ಟಿ, ಮಹಿಳಾ ವಿಭಾಗದ ಅಧ್ಯಕ್ಷರಾದ ಶೋಭಾ ವಿ ಶೆಟ್ಟಿ ಉಪಸ್ಥಿತರಿದ್ದರು. ಸಂಘದ ಉಪಾಧ್ಯಕ್ಷ ವಿಠ್ಠಲ್ ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮವನ್ನು ವಸಂತ್ ಶೆಟ್ಟಿ ನಿರೂಪಿಸಿದರು.