ಬಾಂಬೆ ಬಂಟ್ಸ್ ಅಸೋಸಿಯೇಶನ್ನ ಜೂಯಿ ನಗರ ಬಂಟ್ಸ್ ಸೆಂಟರ್ನ ಶಶಿಕಲಾ ಮನ್ಮೋಹನ್ ಶೆಟ್ಟಿ ಕಾಂಪ್ಲೆಕ್ಸ್ನ ಸೌಮ್ಯಲತಾ ಸದಾನಂದ ಶೆಟ್ಟಿ ಸಭಾಗೃಹದಲ್ಲಿ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆ, ರಕ್ತದಾನ ಶಿಬಿರವು ಅಸೋಸಿಯೇಷನ್ ನ ಅಧ್ಯಕ್ಷರಾದ ಸಿಎ ಸುರೇಂದ್ರ ಕೆ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಉಪಾಧ್ಯಕ್ಷ ನ್ಯಾಯವಾದಿ ಡಿ. ಕೆ. ಶೆಟ್ಟಿ, ಗೌರವ ಪ್ರಧಾನ ಕಾರದರ್ಶಿ ಐಕಳ ಕಿಶೋರ್ ಕೆ. ಶೆಟ್ಟಿ, ಗೌರವ ಕೋಶಾಧಿಕಾರಿ ಸಿಎ ವಿಶ್ವನಾಥ ಎಸ್.ಶೆಟ್ಟಿ, ಉನ್ನತ ಶಿಕ್ಷಣ ಸಮಿತಿಯ ಕಾರ್ಯದರ್ಶಿ ಶ್ರೀಧರ್ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ತೇಜಾಕ್ಷೀ ಎಸ್. ಶೆಟ್ಟಿ, ಉಪ ಕಾರ್ಯಧ್ಯಕ್ಷೆ ಶಾಂತ ನಾರಾಯಣ ಶೆಟ್ಟಿ, ಸದಾನಂದ ಡಿ ಶೆಟ್ಟಿ, ಮಹಿಳಾ ವಿಭಾಗದ ನಾಗವೇಣಿ ಶೆಟ್ಟಿ, ಸುನಿತಾ ಸದಾನಂದ ಶೆಟ್ಟಿ, ರೇವತಿ ಶೆಟ್ಟಿ, ಶ್ರೀಮತಿ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲೆ ಡಾಕ್ಟರ್ ರಶ್ಮಿ ಚಿತ್ತಲಾಂಗೆ, ರಾತ್ರಿ ಕಾಲೇಜಿನ ಪ್ರಾಂಶುಪಾಲ ಡಾ. ಎಸ್ ಎಸ್ ಭಂಡಾರಿ ಹಾಗೂ ಇತರ ಪದಾಧಿಕಾರಿಗಳು, ಮಹಿಳಾ ವಿಭಾಗ, ಯುವ ವಿಭಾಗ, ವಿವಿಧ ಉಪಸಮಿತಿಗಳ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಮಾಜಿ ಅಧ್ಯಕ್ಷರು, ಟ್ರಸ್ಟಿಗಳು ಕಾಲೇಜಿನ ವಿದ್ಯಾರ್ಥಿಗಳು ಪಥ ಸಂಚಲ ನಡೆಸಿದರು. ಬಳಿಕ ಸಿಎ ಸುರೇಂದ್ರ ಕೆ ಶೆಟ್ಟಿ ರಾಷ್ಟ್ರ ಧ್ವಜಾರೋಹಣ ನಡೆಸಿ, ಧ್ವಜಕ್ಕೆ ಗೌರವ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಂದ ರಕ್ತದಾನ ಶಿಬಿರ ನಡೆಯಿತು. ಸುಮಾರು 45 ಯೂನಿಟ್ ರಕ್ತ ಸಂಗ್ರಹಿಸಿ ಅಪೋಲೋ ಆಸ್ಪತ್ರೆಗೆ ನೀಡಲಾಯಿತು. ರಕ್ತದಾನ ಶಿಬಿರವನ್ನು ಉದ್ದೇಶಿಸಿ ಮಾತನಾಡಿದ ಅಸೋಸಿಯೇಷನ್ ಅಧ್ಯಕ್ಷ ಸಿಎ ಸುರೇಂದ್ರ ಕೆ ಶೆಟ್ಟಿ ದೇಶ ರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ. ದೇಶವನ್ನು ರಕ್ಷಣೆ ಮಾಡುವುದಕ್ಕಾಗಿ ತನ್ನ ಬದುಕನ್ನೇ ತ್ಯಾಗ ಮಾಡಿದ ಸ್ವಾತಂತ್ರ್ಯ ಯೋಧರಿಗೆ ಮತ್ತು ರಾಷ್ಟ್ರ ನಾಯಕರಿಗೆ ನುಡಿ ನಮನ ಸಲ್ಲಿಸಿದರು. ದೇಶದ ರಕ್ಷಣೆಗಾಗಿ ಜೀವದ ಹಂಗು ತೊರೆದು ಸೇವೆ ಮಾಡುವ ಎಲ್ಲಾ ಯೋಧರಿಗೆ ಗೌರವ ಸಲ್ಲಿಸಿದರು. ಅಸೋಸಿಯೇಷನ್ ನ
ಉನ್ನತ ಶಿಕ್ಷಣ ಸಂಸ್ಥೆ ರಾತ್ರಿ ಕಾಲೇಜನ್ನು ಸ್ಥಾಪಿಸಿ, ಶೈಕ್ಷಣಿಕ ಕ್ಷೇತ್ರದಲ್ಲಿ ಕ್ರಾಂತಿ ನಿರ್ಮಿಸಿ ಸಾವಿರಾರು ವಿದ್ಯಾರ್ಥಿಗಳಿಗೆ ಜ್ಞಾನ ದಾಸೋಹ ನೀಡುತ್ತಿದೆ.
ಅಸೋಸಿಯೇಷನ್ ಕಳೆದ ಹಲವು ದಶಕಗಳಿಂದ ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕ ಇನ್ನಿತರ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿದೆ. ಪ್ರತಿವರ್ಷ ಸಮಾಜ ಬಾಂಧವರಿಗಾಗಿ ಕ್ರೀಡೋತ್ಸವವನ್ನು ಅದ್ದೂರಿಯಾಗಿ ನಡೆಸುತ್ತಿದ್ದು, ಶೈಕ್ಷಣಿಕ ನೆರವು ವಿತರಣೆ, ಶೈಕ್ಷಣಿಕ ದತ್ತು ಸ್ವೀಕಾರ, ಯಕ್ಷಗಾನ ಪ್ರದರ್ಶನ, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ, ಆರೋಗ್ಯ ಶಿಬಿರ, ರಕ್ತದಾನ ಶಿಬಿರ ಇನ್ನಿತರ ಸೇವೆ ಸಲ್ಲಿಸಿ ಸಮಾಜ ಬಾಂಧವರ ಮನೆ-ಮನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಸ್ವಜಾತಿ ಬಾಂಧವರನ್ನು ಒಂದುಗೂಡಿಸಿ ಮೈತ್ರಿ-ಒಗ್ಗಟ್ಟನ್ನು ಬೆಳೆಸುವುದು, ಚಿಕಿತ್ಸೆ, ಕಾನೂನು, ಉದ್ಯೋಗ, ಶಿಕ್ಷಣ ಮೊದಲಾದ ವಿಷಯಗಳಲ್ಲಿ ಸಮಾಜ ಬಾಂಧವರಿಗೆ ಪರಸ್ಪರ ಸಹಾಯ – ಮಾರ್ಗದರ್ಶನ ನೀಡುತ್ತಿರುವುದಾಗಿ ಹೇಳಿದರು.