ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯನ್ನು ಬಹಳ ಮಹತ್ವವಾಗಿ ಅನುಷ್ಠಾನಗೊಳಿಸಲು ವಿವಿಧ ಗ್ರಾಮ ಪಂಚಾಯತ್ ಕಾರ್ಯ ನಿರ್ವಹಣೆ ಸಿದ್ಧಪಡಿಸಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಗ್ರಾಮ ಪಂಚಾಯತ್ ಮೊಳಹಳ್ಳಿ ಇವರ ಸಹಯೋಗದೊಂದಿಗೆ ಗೃಹಲಕ್ಷ್ಮಿ ಯೋಜನೆ ಅನುಷ್ಠಾನ ಕಾರ್ಯಕ್ರಮ- 2023 ಜರುಗಿತು. ಅದೇ ರೀತಿ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದ ಸರಕಾರ ಮೈಸೂರಿನಲ್ಲಿಯೂ ಅಧಿಕೃತವಾಗಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆಯನ್ನು ನೀಡಿದರು. ಅದೇ ರೀತಿ ಕುಂದಾಪುರ ತಾಲೂಕಿನ ಮೊಳಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನ ಕಾರ್ಯಕ್ರಮ ಗ್ರಾಮ ಪಂಚಾಯತ್ ಆವರಣದಲ್ಲಿ ಸಂಭ್ರಮದಿಂದ ಜರುಗಿತು.
ಗೃಹಿಣಿಯರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಗ್ರಾಮ ಪಂಚಾಯತ್ ಆವರಣಕ್ಕೆ ಆಗಮಿಸಿ ರಂಗೋಲಿಯನ್ನು ಹಾಕುವುದರ ಮೂಲಕ, ನಾ – ನಾಯಕಿ ಎನ್ನುವ ಘೋಷಣೆಯೊಂದಿಗೆ ಗೃಹಲಕ್ಷ್ಮಿ ಯೋಜನೆಯನ್ನು ಬರಮಾಡಿಕೊಂಡರು. ಕಾಂಗ್ರೆಸ್ ಸರ್ಕಾರದ ಚುನಾವಣಾ ಪ್ರಣಾಳಿಕೆಯಲ್ಲಿ 5 ಗ್ಯಾರಂಟಿಗಳನ್ನು ಘೋಷಿಸಿದ್ದಾರೆ. ಅದೇ ರೀತಿ “ನುಡಿದಂತೆ ನಡೆದಿದ್ದೇವೆ” ಎನ್ನುವ ಘೋಷ ವಾಕ್ಯದೊಂದಿಗೆ ಗೃಹಲಕ್ಷ್ಮಿ ಯೋಜನೆಯನ್ನು ವಿಶೇಷವಾಗಿ ಅನುಷ್ಠಾನಗೊಳಿಸಲಾಯಿತು ಕಾರ್ಯಕ್ರಮದಲ್ಲಿ ಗೃಹಲಕ್ಷ್ಮಿ ಯೋಜನೆ ಬಗ್ಗೆ ಹಾಗೂ ಯೋಜನೆಯ ಲಾಭಾಂಶವನ್ನು ಪಡೆಯುವಂತಹ ರೀತಿ ಮತ್ತು ಕಾಂಗ್ರೆಸ್ ಸರ್ಕಾರದ ಆಡಳಿತದ ವ್ಯವಸ್ಥೆ ಹಾಗೂ ಸಾರ್ವಜನಿಕರಿಗೆ ಆಗುವಂತಹ ಪ್ರಯೋಜನಗಳ ಬಗ್ಗೆ ಕಾರ್ಯಕ್ರಮದಲ್ಲಿ ಚರ್ಚಿಸಲಾಯಿತು.
ಕಾರ್ಯಕ್ರಮದಲ್ಲಿ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಕುಂದಾಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ. ದಿನೇಶ್ ಹೆಗ್ಡೆ ಮೊಳಹಳ್ಳಿ, ನೂತನ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಶೇಖರ್ ಶೆಟ್ಟಿ ದ್ಯಾವಲಬೆಟ್ಟು, ಪಂಚಾಯತ್ ಸದಸ್ಯರಾದ ವಾಣಿ ಶೆಟ್ಟಿ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜ್ಯೋತಿ ಉದಯ್ ಕುಲಾಲ್, ಗ್ರಾಮ ಪಂಚಾಯತ್ ನ ಸಿಬ್ಬಂದಿ ವರ್ಗದವರು ಹಾಗೂ ಗ್ರಾಮ ಪಂಚಾಯತ್ ಸರ್ವ ಸದಸ್ಯರು, ಊರಿನ ಸಮಸ್ತ ನಾಗರಿಕರು ಹಾಗೂ ಮಹಿಳೆಯರು ಮತ್ತು ಯೋಜನೆಯ ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. ಮೊಳಹಳ್ಳಿ ಗ್ರಾಮದಲ್ಲಿ ಗೃಹಲಕ್ಷ್ಮಿ ಯೋಜನಾ ಅನುಷ್ಠಾನ ಕಾರ್ಯಕ್ರಮ ವಿಶೇಷವಾಗಿ ಜರಗುವುದರೊಂದಿಗೆ ಸರ್ಕಾರದ ಕಾರ್ಯಕ್ರಮಗಳನ್ನು ಗ್ರಾಮೀಣ ಮಟ್ಟದಲ್ಲಿ ನೀಡುವಲ್ಲಿ ಕಾರ್ಯಕ್ರಮ ಯಶಸ್ವಿಯಾಯಿತು. ಕಾರ್ಯಕ್ರಮದಲ್ಲಿ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಎಮ್ ದಿನೇಶ್ ಹೆಗ್ಡೆ ಮೊಳಹಳ್ಳಿ ಮತ್ತು ನೂತನ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಶೇಖರ್ ಶೆಟ್ಟಿ ದ್ಯಾವಲ್ಬೆಟ್ಟು ಅವರು ಯೋಜನೆಗಳ ಬಗ್ಗೆ ಹಾಗೂ ವಿಸ್ತಾರವಾದ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಫಲಾನುಭವಿಗಳಿಗೆ ಇದೇ ಸಂದರ್ಭದಲ್ಲಿ ಮನವರಿಕೆ ಮಾಡಿದರು.