ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಜೊತೆ ಕಾರ್ಯದರ್ಶಿ ಪ್ರವೀಣ್ ಭೋಜ ಶೆಟ್ಟಿ ಅವರಿಂದ ತೆರವಾದ ಸ್ಥಾನಕ್ಕೆ ಬಂಟವಾಳ ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ರಂಗೋಲಿ ಜೊತೆ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಮೂಲ್ಕಿಯ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿರುವ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಡಳಿತ ಕಛೇರಿಯಲ್ಲಿ ನಡೆದ ಒಕ್ಕೂಟದ ಆಡಳಿತ ಮಂಡಳಿಯ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಚಂದ್ರಹಾಸ ಶೆಟ್ಟಿ ಅವರು ಬಂಟ್ವಾಳ ಬಂಟರ ಸಂಘದ ಅಧ್ಯಕ್ಷರಾಗಿರುತ್ತಾರೆ. ಸಭೆಯಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಯಕರ್ ಶೆಟ್ಟಿ ಇಂದ್ರಾಳಿ, ಕೋಶಾಧಿಕಾರಿ ಉಳ್ತೂರು ಮೋಹನದಾಸ್ ಶೆಟ್ಟಿ, ಮಹಾದಾನಿ ಕನ್ಯಾನ ಸದಾಶಿವ ಶೆಟ್ಟಿ ಉಪಸ್ಥಿತರಿದ್ದರು.
Previous Articleಆಳ್ವಾಸ್ ಪತ್ರಿಕೋದ್ಯಮ ವಿಭಾಗದಲ್ಲಿ ಪೋಷಕ-ಶಿಕ್ಷಕರ ಸಭೆ ವೃತ್ತಿ ಬದುಕಿನಲ್ಲಿ ಸ್ವಚ್ಛ ಮನಸ್ಸು ಮುಖ್ಯ:ಕುರಿಯನ್
Next Article ಸುರತ್ಕಲ್ ನಲ್ಲಿ ರಂಗಚಾವಡಿ ಪ್ರಶಸ್ತಿ ಪ್ರದಾನ ಸಮಾರಂಭ