ಬಂಟರ ಯಾನೆ ನಾಡವರ ಸಂಘ ಹೆಬ್ರಿ ಅಜೆಕಾರು ವಲಯ ಇದರ ಆಶ್ರಯದಲ್ಲಿ ಸತ್ಯನಾರಾಯಣ ಪೂಜೆ, ಭಜನಾ ಕಾರ್ಯಕ್ರಮ ಹಾಗೂ ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸಹಾಯಧನ ವಿತರಣೆ ಕಾರ್ಯಕ್ರಮ ಬಂಟರ ಸಭಾಂಗಣದಲ್ಲಿ ನಡೆಯಿತು.
ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ಫಲಾನುಭವಿಗಳಿಗೆ ಸಹಾಯಧನವನ್ನು ವಿತರಿಸಲಾಯಿತು.

ಹೆಬ್ರಿ ಅಜೆಕಾರು ವಲಯ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷ ಸೀತಾನದಿ ವಿಠ್ಠಲ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಮಾತೃ ಸಂಘದ ನಿರ್ದೇಶಕರಾದ ಭೂತುಗುಂಡಿ ಕರುಣಾಕರ ಶೆಟ್ಟಿ, ಪ್ರಮೋದ ರಾಜಕುಮಾರ್ ಶೆಟ್ಟಿ, ಮಹಿಳಾ ಬಂಟರ ಸಂಘದ ಅಧ್ಯಕ್ಷೆ ಬಾನು ಪಿ.ಬಲ್ಲಾಳ್, ಸಂಘದ ಉಪಾಧ್ಯಕ್ಷರಾದ ವಾದಿರಾಜ್ ಶೆಟ್ಟಿ,
ದಯಾನಂದ ಆರ್ ಶೆಟ್ಟಿ, ಸುರೇಶ್ ಶೆಟ್ಟಿ ಗುಳಿಬೆಟ್ಟು, ಆಶಾ ಬಿ.ಶೆಟ್ಟಿ, ಕೋಶಾಧಿಕಾರಿ ರವೀಂದ್ರನಾಥ ಶೆಟ್ಟಿ, ಮಹಿಳಾ ಘಟಕದ ಕಾರ್ಯದರ್ಶಿ ಜ್ಯೋತಿ ಕೆ.ಶೆಟ್ಟಿ, ಯುವ ಬಂಟರ ಸಂಘದ ಅಧ್ಯಕ್ಷ ದಿನೇಶ್ ಶೆಟ್ಟಿ, ರಮೇಶ್ ಶೆಟ್ಟಿ, ಸತ್ಯನಾರಾಯಣ ಪೂಜಾ ಸಮಿತಿ ಸಂಚಾಲಕ ಉದಯ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ನವೀನ್ ಕೆ.ಅಡ್ಯಂತಾಯ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.





































































































