ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿಯ ಸಮಾಲೋಚನಾ ಸಭೆಯಲ್ಲಿ ದಿನಾಂಕ 03-10-2023 ರಂದು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರು, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.
ದೇಶ ವಿದೇಶದಲ್ಲಿರುವ ಭಕ್ತಾಭಿಮಾನಿಗಳ ಸಹಕಾರದೊಂದಿಗೆ ದೇವಸ್ಥಾನ ಜೀರ್ಣೋದ್ಧಾರಗೊಳ್ಳುತ್ತಿದ್ದು ಉಡುಪಿ ಜಿಲ್ಲೆಯಾದ್ಯಂತ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಗ್ರಾಮ ಸಮಿತಿ ರಚಿಸುವ ಬಗ್ಗೆ ಸಮಾಲೋಚನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಮಟ್ಟಾರ್ ರತ್ನಾಕರ್ ಹೆಗ್ಡೆ, ಅಶೋಕ್ ಶೆಟ್ಟಿ, ವಿವಿಧ ಸಮುದಾಯದ ಮುಖಂಡರು, ವಿವಿಧ ಪಕ್ಷಗಳ ಮುಖಂಡರು, ಕಾಪು ಹೊಸ ಮಾರಿಗುಡಿ ದೇವಸ್ಥಾನದ ಅಡಳಿತ ಮಂಡಳಿ ಸದಸ್ಯರು, ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.