ಉಡುಪಿ ಜಿಲ್ಲೆಯ ವ್ಯಾಪ್ತಿಯಲ್ಲಿ ಮರಳು, ಕೆಂಪುಕಲ್ಲು ಹಾಗೂ ಇತರೆ ಖನಿಜಗಳ ಗಣಿಗಾರಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಭೆ ಜರುಗಿತು.
ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ, ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ, ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಕುಂದಾಪುರ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ: ಅರುಣ್ .ಕೆ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ನಿರ್ದೇಶಕ ಗಿರೀಶ್. ಆರ್ ಉಪಸ್ಥಿತರಿದ್ದರು.