ನವೆಂಬರ್ ದಿನಾಂಕ 18 ಮತ್ತು 19 ರಂದು ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ಉಡುಪಿಯಲ್ಲಿ ಆಯೋಜಿಸಲಾದ “ಉದ್ಯೋಗ ಮೇಳ” ಕಾರ್ಯಕ್ರಮದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿಯವರನ್ನು ಅತಿಥಿಯಾಗಿ ಭಾಗವಹಿಸಿದ ಸಂದರ್ಭ ವೇದಿಕೆಯಲ್ಲಿ ನೆರೆದಿರುವ ಗಣ್ಯತಿ ಗಣ್ಯರು ಗೌರವದಿಂದ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲೆಯ ಮಾನ್ಯ ಜಿಲ್ಲಾಧಿಕಾರಿಯವರಾದ ಶ್ರೀಮತಿ ಡಾ. ಕೆ. ವಿದ್ಯಾಕುಮಾರಿ, ಎಂ.ಆರ್.ಜಿ. ಗ್ರೂಪ್ಸ್ ನ ಆಡಳಿತ ನಿರ್ದೇಶಕ ಶ್ರೀ ಕೆ. ಪ್ರಕಾಶ್ ಶೆಟ್ಟಿ, ಶಾಸಕರಾದ ಸನ್ಮಾನ್ಯ ಶ್ರೀ ಸಿ. ಟಿ. ರವಿ, ಶ್ರೀ ಯಶ್ ಪಾಲ್ ಸುವರ್ಣ, ಶ್ರೀ ಪ್ರಮೋದ್ ಮಧ್ವರಾಜ್, ಶ್ರೀ ಪ್ರಸಾದ್ ರಾಜ್ ಕಾಂಚನ್, ಶ್ರೀ ಮನೋಹರ್ ಶೆಟ್ಟಿ ಸಾಯಿರಾಧ, ಶ್ರೀ ಅಶೋಕ್ ಕುಮಾರ್ ಶೆಟ್ಟಿ, ಶ್ರೀ ವಿಜಿತ್ ಶೆಟ್ಟಿ, ಶ್ರೀ ಉಪೇಂದ್ರ ಶೆಟ್ಟಿ, ಶ್ರೀ ಸುರೇಶ್ ಶೆಟ್ಟಿ ಗುರ್ಮೆ, ಶ್ರೀ ನವೀನ್ ಚಂದ್ರ ಜೆ ಶೆಟ್ಟಿ ಪಡುಬಿದ್ರಿ, ಶ್ರೀ ಕಾರ್ತಿಕ್ ಶೆಟ್ಟಿ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.