ಮಂಗಳೂರು ತಾಲೂಕಿನ ಎಕ್ಕಾರು ಎಕ್ಕಾರು ಬಂಟರ ಸಂಘದ ಎಕ್ಕಾರು ಸುಜಾತ ಶೆಟ್ಟಿ ಹಾಗೂ ಕನ್ಯಾನ ಸದಾಶಿವ ಶೆಟ್ಟಿ ಬಯಲು ರಂಗ ಮೈದಾನ ಉದ್ಘಾಟನೆ, ಗೌರವಾರ್ಪಣೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ನವೆಂಬರ್ 26 ಆದಿತ್ಯವಾರದಂದು ಎಕ್ಕಾರು ಬಂಟರ ಭವನದ ನಡ್ಯೋಡಿ ಗುತ್ತು ಶಾರದಾ ಭಾಸ್ಕರ್ ಶೆಟ್ಟಿ ಸಭಾಂಗಣದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಪೂರ್ವಾಹ್ನ ಗಂಟೆ 9 ರಿಂದ ಸ್ಥಳೀಯ ಬಂಟ ಕಲಾ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ “ಭಾರತ ದರ್ಶನ” ನಡೆಯಲಿದೆ. ಪೂರ್ವಾಹ್ನ ಗಂಟೆ 9.30 ರಿಂದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಸಮಾರಂಭದ ಅಧ್ಯಕ್ಷತೆಯನ್ನು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ವಹಿಸಲಿದ್ದಾರೆ. ಕಾರ್ಯಕ್ರಮವನ್ನು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶೀಯ ಮೊಕ್ತೇಸರ ಕೊಡೆತ್ತೂರು ಗುತ್ತು ಸನತ್ ಕುಮಾರ್ ಶೆಟ್ಟಿ ಉದ್ಘಾಟಿಸಲಿದ್ದಾರೆ. ಬಯಲು ರಂಗ ಮೈದಾನವನ್ನು ಹೇರಂಭ ಇಂಡಸ್ಟ್ರೀಸ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕ ಕನ್ಯಾನ ಸದಾಶಿವ ಶೆಟ್ಟಿ ಲೋಕಾರ್ಪಣೆ ಮಾಡಲಿದ್ದಾರೆ.
ಕಾರ್ಯಕ್ರಮದಲ್ಲಿ ಮಹಾನ್ ಸಾಧಕ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರನ್ನು ಸನ್ಮಾನಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಗಣ್ಯ ಅತಿಥಿಯಾಗಿ ಪಡುಬಿದ್ರಿ ಬಂಟರ ಸಂಘದ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಬೆಳಪು, ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಸತೀಶ್ ಶೆಟ್ಟಿ ಪಟ್ಲ, ಕೃಷ್ಣ ಡಿ ಶೆಟ್ಟಿ, ಕಲ್ಯಾಣ್ ಗುರುದೇವ್ ಹೋಟೆಲ್ ನ ಆಡಳಿತ ನಿರ್ದೇಶಕ ಭಾಸ್ಕರ್ ಶೆಟ್ಟಿ, ನಿತಿನ್ ಹೆಗ್ಡೆ, ವಸಂತ್ ಶೆಟ್ಟಿ, ರವಿರಾಜ್ ಶೆಟ್ಟಿ ನಿಟ್ಟೆ, ನ್ಯಾಯವಾದಿ ವಿಕ್ರಂ ಹೆಗ್ಡೆ ಮತ್ತಿತರರು ಆಗಮಿಸಲಿದ್ದಾರೆ. ಈ ಸಂದರ್ಭದಲ್ಲಿ ಡಾ ಗಣನಾಥ್ ಶೆಟ್ಟಿ ಎಕ್ಕಾರು ಮತ್ತು ಹಿರಿಯ ಕೃಷಿಕರಾದ ಸದಾಶಿವ ಶೆಟ್ಟಿ ಮುರ ಅವರನ್ನು ಸನ್ಮಾನಿಸಲಾಗುವುದು. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಮಾಜದ ಬಂಧುಗಳು ಎಲ್ಲಾ ರೀತಿಯಲ್ಲಿ ಸಹಕರಿಸುವಂತೆ ಎಕ್ಕಾರು ಬಂಟರ ಸಂಘದ ಅಧ್ಯಕ್ಷ ರತ್ನಾಕರ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸುರೇಶ್ ಶೆಟ್ಟಿ ಸಹಿತ ಸಂಘದ ಎಲ್ಲಾ ಪದಾಧಿಕಾರಿಗಳು, ಸಮಿತಿ ಸದಸ್ಯರು ಮತ್ತು ಸರ್ವ ಸದಸ್ಯರುಗಳು ವಿನಂತಿಸಿಕೊಂಡಿದ್ದಾರೆ.