ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಗೌರವ ಕೋಶಾಧಿಕಾರಿ ಉಳ್ತೂರು ಮೋಹನ್ ದಾಸ್ ಶೆಟ್ಟಿಯವರನ್ನು ಮೂಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಒಕ್ಕೂಟದ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿರುವ ಪ್ರವೀಣ್ ಭೋಜ ಶೆಟ್ಟಿ ಆಡಳಿತ ಕಛೇರಿಯಲ್ಲಿ ನಡೆದ ಸಭೆಯಲ್ಲಿ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಗೌರವಿಸಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಮಹಾದಾನಿ ಕನ್ಯಾನ ಸದಾಶಿವ ಶೆಟ್ಟಿ, ಮಹಾ ನಿರ್ದೇಶಕರಾದ ತೋನ್ಸೆ ಆನಂದ್ ಎಂ ಶೆಟ್ಟಿ, ಉಪಾಧ್ಯಕ್ಷರಾದ ಕರ್ನಿರೆ ವಿಶ್ವನಾಥ ಶೆಟ್ಟಿ, ಗೌ ಕಾರ್ಯದರ್ಶಿ ಇಂದ್ರಾಳಿ ಜಯಕರ ಶೆಟ್ಟಿ, ರವಿರಾಜ್ ಶೆಟ್ಟಿ, ಪತ್ರಕರ್ತ ಶರತ್ ಶೆಟ್ಟಿ ಕಿನ್ನಿಗೋಳಿ ಪಾಲ್ಗೊಂಡಿದ್ದರು.






































































































