ಎಫ್ ಕೆಸಿಸಿಐ ಮಾಜಿ ಅಧ್ಯಕ್ಷ, ಹಿರಿಯ ಮುಖಂಡ ತುಮ್ಕಾನೆ ಸುಧಾಕರ್ ಎಸ್ ಶೆಟ್ಟಿ ಅವರನ್ನು ಜೆಡಿಎಸ್ ರಾಜ್ಯ ಹಿರಿಯ ಉಪಾಧ್ಯಕ್ಷರನ್ನಾಗಿ ನೇಮಿಸಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅದೇಶಿಸಿದ್ದಾರೆ. ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ರಾಜಕೀಯ ಪ್ರವೇಶ ಮಾಡಿದ ಸುಧಾಕರ ಶೆಟ್ಟಿ ಚುನಾವಣೆಯಲ್ಲಿ ಸೋತರೂ ಶೃಂಗೇರಿ ಕ್ಷೇತ್ರದಲ್ಲಿ ನೆಲೆ ಕಳೆದುಕೊಂಡಿದ್ದ ಜೆಡಿಎಸ್ ನ್ನು ಬಲವರ್ಧನೆಗೊಳಿಸುವಲ್ಲಿ ಯಶಸ್ವಿಯಾದರು.
ಇವರ ಪಾದರಸ ವ್ಯಕ್ತಿತ್ವ, ಸಂಘಟನಾ ಚತುರತೆ, ಸಾಮಾಜಿಕ ಕಳಕಳಿ ತಿಳಿದಿರುವ ಎಚ್ಡಿಕೆ ರಾಜ್ಯ ಮಟ್ಟದಲ್ಲಿ ಪಕ್ಷ ಸಂಘಟಿಸಿರುವ ನಿಟ್ಟಿನಲ್ಲಿ ಪಕ್ಷದ ಹಿರಿಯ ಉಪಾಧ್ಯಕ್ಷ ಸ್ಥಾನ ನೀಡಲಾಗಿದೆ. ನನ್ನ ಮೇಲೆ ಇರಿಸಿದ ನಂಬಿಕೆಗೆ ಚಿರಋಣಿಯಾಗಿದ್ದೇನೆ. ಪಕ್ಷ ಬಲವರ್ಧನೆಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದಿರುವ ಸುಧಾಕರ್ ಶೆಟ್ಟಿ ತನಗೆ ಜವಾಬ್ದಾರಿಯುತ ಸ್ಥಾನ ನೀಡಿರುವ ಎಚ್.ಡಿ. ದೇವೇಗೌಡರು ಮತ್ತು ಎಚ್.ಡಿ. ಕುಮಾರ ಸ್ವಾಮಿಯವರಿಗೆ ಕೃತಜ್ಞತೆ ತಿಳಿಸಿದ್ದಾರೆ.