ಮಂಗಳೂರಿನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ ಇದರ ಆಡಳಿತ ಮಂಡಳಿ ನಿರ್ದೇಶಕರಾಗಿರುವ ಶಶಿಕುಮಾರ್ ರೈ ಬಾಲ್ಯೊಟ್ಟು ಅವರನ್ನು ದ.ಕ ಸಹಕಾರಿ ಕೃಷಿ ಅಭಿವೃದ್ಧಿ ಸಂಘ ನಿಯಮಿತ ಮಂಗಳೂರು ಇದರ ಆಡಳಿತ ಮಂಡಳಿಗೆ ನಾಮ ನಿರ್ದೇಶಕ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.
ಎಸ್ ಸಿಡಿಸಿಸಿ ಬ್ಯಾಂಕ್ ವತಿಯಿಂದ ದ.ಕ ಸಹಕಾರಿ ಕೃಷಿ ಅಭಿವೃದ್ಧಿ ಸಂಘ ( ನಿ )2019 ಮೇ.20 ರಂದು ನಾಮ ನಿರ್ದೇಶನಗೊಂಡಿದ್ದ ವಿನಯ್ ಕುಮಾರ್ ಸೂರಿಂಜೆ ಅವರ ಸ್ಥಾನಕ್ಕೆ ಶಶಿಕುಮಾರ್ ರೈ ಬಾಲ್ಯೋಟ್ಟು ಅವರನ್ನು ಆಯ್ಕೆ ಮಾಡಲಾಗಿದೆ.25/03/2024 ರಂದು ನಡೆದ ಬ್ಯಾಂಕಿನ ಆಡಳಿತ ಸಭೆಯ ನಿರ್ಣಯದಂತೆ ಈ ನೇಮಕ ಮಾಡಲಾಗಿದೆ ಎಂದು ಬ್ಯಾಂಕಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ (ಪ್ರಭಾರ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.