ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕ, ಮೆರಿಟ್ ಹಾಸ್ಪಿಟಲಿಟಿ ಸರ್ವಿಸಸ್ ಪ್ರೈ.ಲಿ. ಮುಂಬಯಿಯ ಸಿಎಂಡಿ ಬೆಳ್ಳಾಡಿ ಅಶೋಕ್ ಶೆಟ್ಟಿಯವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಹಾಗೂ ಕೋಶಾಧಿಕಾರಿ ಉಳ್ತೂರು ಮೋಹನ್ ದಾಸ್ ಶೆಟ್ಟಿಯವರ ವಿಶೇಷ ಮನವಿಗೆ ಸ್ವಂದಿಸಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾ ನಿರ್ದೇಶಕರಾಗಿ ಸೇರ್ಪಡೆಗೊಂಡಿದ್ದಾರೆ.


ಅವರು ಈ ಹಿಂದೆ ಒಕ್ಕೂಟದ ನಿರ್ದೇಶಕರಾಗಿದ್ದರು. ಇನ್ನು ಮುಂದೆ ಮಹಾ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಅವರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮತ್ತು ಕೋಶಾಧಿಕಾರಿ ಉಳ್ತೂರು ಮೋಹನದಾಸ್ ಶೆಟ್ಟಿ ಹೂಗುಚ್ಛ ನೀಡಿ ಅಭಿನಂದಿಸಿದ್ದಾರೆ.








































































































