ಆತ್ಮಶಕ್ತಿ, ಮನೋಬಲದಿಂದ ಮುನ್ನುಗ್ಗಿದರೆ, ಭವಿಷ್ಯದಲ್ಲಿ ಮಹತ್ತರ ಸಾಧನೆ ಸಾಧಿಸಬಹುದು. ವಿದ್ಯೆಯ ಜೊತೆಗೆ ಛಲ ಹಾಗೂ ಆತ್ಮಸ್ಥೈರ್ಯವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಸಮೃದ್ಧ ಬೈಂದೂರು ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಬಿ.ಎಸ್.ಸುರೇಶ್ ಶೆಟ್ಟಿ ಹೇಳಿದರು. ಅವರು ಮಂಗಳವಾರ (ಜೂನ್18) ರಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆಯವರ ಮಾರ್ಗದರ್ಶನದಲ್ಲಿ ಸಮೃದ್ಧ ಬೈಂದೂರು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಸರೆ ಚಾರಿಟೇಬಲ್ ಟ್ರಸ್ಟ್ ವಂಡ್ಸೆ,, ಮತ್ತು ದೀಪಾ ಜ್ಯೋತಿ ನೆಟ್ವರ್ಕ್ ಆಫ್ ಪಾಸಿಟಿವ್ ಪೀಪಲ್ಸ್ ಉಡುಪಿ, ಇವರ ಸಂಯುಕ್ತ ಆಶ್ರಯದಲ್ಲಿ ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ವಿಶೇಷ ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಬ್ಯಾಗ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಕುಂದಾಪುರ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಹಾಗೂ ಸಮೃದ್ಧ ಬೈಂದೂರು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಬಿ.ಎಸ್.ಸುರೇಶ್ ಶೆಟ್ಟಿ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಸಮೃದ್ಧ ಬೈಂದೂರು ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಉಚಿತ ಪುಸ್ತಕ ಹಾಗೂ ಬ್ಯಾಗ್ ವಿತರಿಸಲಾಯಿತು.
ದೀಪ ಜ್ಯೋತಿ ಸಂಸ್ಥೆಯ ಅಧ್ಯಕ್ಷ ಸಂತೋಷ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಿಡ್ಸ್ ನಿಯಂತ್ರಣಧಿಕಾರಿ ಡಾ. ಚಿದಾನಂದ ಸಂಜು, ತಹಸೀಲ್ದಾರ್ ಶೋಭಾಲಕ್ಷ್ಮಿ, ಶೋಭಾ ಲಕ್ಷ್ಮೀ ಎಚ್.ಎಸ್*. ತಹಸೀಲ್ದಾರರು ಕುಂದಾಪುರ, ಆಸರೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸಂಜೀವ ವಂಡ್ಸೆ, ದೀಪ ಜ್ಯೋತಿ ಸಂಸ್ಥೆಯ ಯೋಜನಾಧಿಕಾರಿ ಶಾಂತಿ ನೊರನ್ಹಾ ಹಾಗೂ ಸಂಸ್ಥೆಯ ಸರ್ವ ಸದಸ್ಯರು, ವಿದ್ಯಾರ್ಥಿಗಳು, ಮಕ್ಕಳ ಪೋಷಕರು ಉಪಸಿತರಿದ್ದರು.