ಬದಲಾದ ಕಾಲ ಘಟ್ಟದಲ್ಲಿ ಬದಲಾವಣೆಗೆ ಹೊಂದಿಕೊಳ್ಳದೆ ಹೋದರೆ ವ್ಯಕ್ತಿ ಅಪ್ರಸ್ತುತನಾಗುತ್ತಾನೆ. ಆಧುನಿಕ ಜಗತ್ತಿನಲ್ಲಿ ಶಿಕ್ಷಣದ ಜತೆಗೆ ಕೌಶಲ್ಯ ಅಭಿವೃದ್ಧಿ ಮತ್ತು ತಾಂತ್ರಿಕ ಜ್ಞಾನ ಪಡೆದುಕೊಂಡು ಕ್ಷಮತೆಯನ್ನು ಹೊಂದುವುದು ಯಶಸ್ಸಿಗೆ ಅತ್ಯಗತ್ಯವಾಗಿದೆ ಎಂದು ಬಡಗುಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಉಡುಪಿಯ ಅಧ್ಯಕ್ಷ ಬಿ ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು.
ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಆಲ್ ಕಾರ್ಗೋ ಲಾಜಿಸ್ಟಿಕ್ ಕಂಪನಿ ಮಂಗಳೂರು ಪ್ರಾಯೋಜಕತ್ವದಲ್ಲಿ ಕುಂತಳನಗರ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ನಲ್ಲಿ ಉಚಿತ ಕಂಪ್ಯೂಟರ್ ಸಾಕ್ಷರತಾ ತರಬೇತಿಯ 15 ನೇ ಬ್ಯಾಚ್ ನ ವಿದ್ಯಾರ್ಥಿಗಳ ಪ್ರಮಾಣಪತ್ರ ವಿತರಣೆ ಹಾಗೂ 16 ನೇ ಬ್ಯಾಚ್ ನ ಓರಿಯೆಂಟೇಶನ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಉಡುಪಿ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಮಾತನಾಡಿದರು. ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಡುಪಿ ಗ್ರಾಮೀಣ ಬಂಟರ ಸಂಘದ ಅಧ್ಯಕ್ಷ ಡಾ. ಎಚ್.ಬಿ ಶೆಟ್ಟಿ, ಮಾಜಿ ಅಧ್ಯಕ್ಷ ಹೇಮಂತ್ ಶೆಟ್ಟಿ, ಮೂಡುಬೆಳ್ಳೆ ಜ್ಞಾನ ಗಂಗಾ ಪಿಯು ಕಾಲೇಜಿನ ಪ್ರಿನ್ಸಿಪಾಲ್ ಡಾ. ಲೀನಾ ನಾಯ್ಕ್, ಮಂಗಳೂರು ಆಲ್ ಕಾರ್ಗೋ ಲಾಜಿಸ್ಟಿಕ್ ಕಂಪೆನಿಯ ಸಿಎಸ್ ಆರ್ ಎಕ್ಸಿಕ್ಯೂಟಿವ್ ಸವಿಸ್ತಾರ್ ಆಳ್ವ, ಮೈಸ್ ಸಂಸ್ಥೆಯ ಪ್ರಭಾರ ಪ್ರಿನ್ಸಿಪಾಲ್ ರವಿ ಕೋಟ್ಯಾನ್, ಕಾರ್ಯಕ್ರಮ ನಿರ್ದೇಶಕ ಪದ್ಮನಾಭ ಹೆಗ್ಡೆ, ದಯಾನಂದ ಶೆಟ್ಟಿ ಕಲ್ಮಂಜೆ, ರಮೇಶ್ ಶೆಟ್ಟಿ ನಿಂಜೂರು, ಗೋಪಾಲ ಶೆಟ್ಟಿ, ದಿವಾಕರ ಶೆಟ್ಟಿ ಮಣಿಪುರ, ವೀರೇಂದ್ರ ಹೆಗ್ಡೆ ಪಳ್ಳಿ, ಹರೀಂದ್ರ ಹೆಗ್ಡೆ, ಅಶೋಕ್ ಶೆಟ್ಟಿ ಕೆಮ್ತೂರು, ಕಂಪ್ಯೂಟರ್ ತರಬೇತುದಾರ ವಿಷ್ಣುಮೂರ್ತಿ ಆಚಾರ್ಯ ಉಪಸ್ಥಿತರಿದ್ದರು.
ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಕೋಶಾಧಿಕಾರಿ ಹಾಗೂ ಕಾರ್ಯಕ್ರಮ ನಿರ್ದೇಶಕ ವಿಜಿತ್ ಶೆಟ್ಟಿ ವಂದಿಸಿದರು. ಜಸ್ಟಿಸ್ ಕೆ.ಎಸ್. ಹೆಗ್ಡೆ ಮ್ಯಾನೇಜ್ ಮೆಂಟ್ ಕಾಲೇಜಿನ ಪ್ರೊಫೆಸರ್ ಸುಧೀರ್ ರಾಜ್ ಕಾರ್ಯಕ್ರಮ ನಿರೂಪಿಸಿದರು.