ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮಂಗಳೂರು ವತಿಯಿಂದ ಸಂಘದ ಸದಸ್ಯರ ಪ್ರತಿಭಾವಂತ ಮಕ್ಕಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಅಹ್ವಾನಿಸಲಾಗಿದೆ. ಸಂಘದ ಸದಸ್ಯರ ಮಕ್ಕಳಿಗೆ 2023-24 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ.95 ಹಾಗೂ ಅದಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ 2023-24 ನೇ ಸಾಲಿನಲ್ಲಿ ಪಿಯುಸಿ ಉತ್ತೀರ್ಣರಾಗಿ, 2024-25 ನೇ ಶೈಕ್ಷಣಿಕ ಸಾಲಿನಲ್ಲಿ ಎಐಎಂಎಸ್, ಬಿಎಂಸಿ, ಎಂಎಂಸಿ, ಸರ್ಕಾರಿ ದಂತ ವೈದ್ಯಕೀಯ ಕಾಲೇಜು ಬೆಂಗಳೂರು ಐಐಟಿ, ಎನ್ಐಟಿಕೆ, ನ್ಯಾಶನಲ್ ಲಾ ಕಾಲೇಜು ಐಐಎಂ ನಂತಹ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ವೃತ್ತಿಪರ ಪದವಿ, ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳು ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ಎಲ್ಲಾ ಶಾಖೆಗಳಲ್ಲಿ ಮತ್ತು ಸಂಘದ ಅಧಿಕೃತ ವೆಬ್ ಸೈಟ್ (http://ramakrishnacredit.com/) ನಲ್ಲಿ ಲಭ್ಯವಿದ್ದು ಜುಲೈ 15 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಸದಸ್ಯರು ಇದರ ಸದುಪಯೋಗ ಪಡೆಯುವಂತೆ ಸಂಘದ ಅಧ್ಯಕ್ಷ ಜೈರಾಜ್ ಬಿ.ರೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.