ಪಿ.ಎನ್.ಆರ್ ಪ್ರೊಡಕ್ಷನ್ ಬ್ಯಾನರ್ ನಲ್ಲಿ ತಯಾರಾದ ಪುಷ್ಪರಾಜ್ ರೈ ಮಲಾರಬೀಡು ನಿರ್ದೇಶನದ “ಆರಾಟ” ಕನ್ನಡ ಸಿನಿಮಾ ಭಾರತ್ ಸಿನಿಮಾಸ್ ನಲ್ಲಿ ಬಿಡುಗಡೆಗೊಂಡಿತು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಆರಾಟ ಕನ್ನಡ ಸಿನಿಮಾ ನಮ್ಮ ಸಂಸ್ಕೃತಿಯನ್ನು, ನಮ್ಮ ಪರಂಪರೆಯನ್ನು ಬಿಂಬಿಸುವ ಸಿನಿಮಾ ಆಗಿದೆ. ಸಿನಿಮಾವನ್ನು ಎಲ್ಲರೂ ವೀಕ್ಷಿಸಿ ಪ್ರೋತ್ಸಾಹಿಸಬೇಕೆಂದರು. ಮುಖ್ಯ ಅತಿಥಿ ಕಟೀಲು ಯಕ್ಷಗಾನ ಮೇಳದ ಮುಖ್ಯಸ್ಥ ದೇವಿಪ್ರಸಾದ್ ಶೆಟ್ಟಿ ಶುಭ ಹಾರೈಸಿದರು.
ಸಮಾರಂಭದಲ್ಲಿ ಶಿವಪ್ರಸಾದ್ ಕಂಡೆಲ್ ಕಾರ್, ಶಿವಪ್ರಸಾದ್ ಆಳ್ವ, ವಿಜಯಕುಮಾರ್ ಕೊಡಿಯಾಲ್ ಬೈಲ್, ಪ್ರಕಾಶ್ ಪಾಂಡೇಶ್ವರ್, ರವಿ ರೈ ಕಳಸ, ಜಗನ್ ಪವಾರ್ ಬೇಕಲ್, ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ, ತಮ್ಮ ಲಕ್ಷಣ, ಸಂತೋಷ್ ಶೆಟ್ಟಿ ಕುಂಬ್ಳೆ, ಶ್ರೀಕಾಂತ್ ಶೆಟ್ಟಿ, ಜ್ಯೋತಿಷ್ ಶೆಟ್ಟಿ, ಸುನಿಲ್ ನೆಲ್ಲಿಗುಡ್ಡೆ, ಅನಿಲ್ ಉಪ್ಪಳ, ಪುಷ್ಪರಾಜ್ ರೈ, ರಾಘವೇಂದ್ರ ಹೊಳ್ಳ, ಮಲ್ಲಿಕಾಪ್ರಸಾದ್, ದಿನೇಶ್ ಶೆಟ್ಟಿ ಮಲಾರಬೀಡು, ರಾಮ್ ಪ್ರಸಾದ್, ಭಾಸ್ಕರ ಚಂದ್ರ ಶೆಟ್ಟಿ, ಕಿರಣ್ ಶೆಟ್ಟಿ, ಪ್ರೇಮ್ ಶೆಟ್ಟಿ ಸುರತ್ಕಲ್, ಉದಯ ಶೆಟ್ಟಿ ಇಡ್ಯಾ, ಅನಿಲ್ ರಾಜ್ ಮೊದಲಾದವರು ಉಪಸ್ಥತರಿದ್ದರು. ಲಕ್ಷ್ಮೀಶ ಸುವರ್ಣ ಕಾರ್ಯಕ್ರಮ ನಿರ್ವಹಿಸಿದರು.