ಕೆರಾಡಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹಯ್ಯಂಗಾರ್ ನಲ್ಲಿ ಸ್ವಯಂಸ್ಪೂರ್ತಿ ಫೌಂಡೇಶನ್ ಬೆಂಗಳೂರು, ಇವರು ಸಮೃದ್ಧ ಬೈಂದೂರು-300 ಟ್ರೀಸ್ ಯೋಜನೆಯಡಿ ನಿರ್ಮಿಸಿರುವ ಸ್ವಯಂಸ್ಪೂರ್ತಿ ಕೌಶಲ್ಯ ಕೇಂದ್ರವನ್ನು ಸ್ವಯಂಸ್ಪೂರ್ತಿ ಫೌಂಡೇಶನ್ ಸ್ಥಾಪಕರಾದ ಜಡ್ಕಲ್ ನಾಗರಾಜ ಶೆಟ್ಟಿಯವರು ಉದ್ಘಾಟಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ನಾಗೇಶ್ ನಾಯ್ಕ, ಪ್ರಮುಖರಾದ ಕೆರಾಡಿ ಪಂಚಾಯತ್ ಅಧ್ಯಕ್ಷರಾದ ಸುದರ್ಶನ ಶೆಟ್ಟಿ, ಸದಸ್ಯರಾದ ರಾಘು ಕೊಠಾರಿ ಕೆರಾಡಿ ಹಾಗೂ ಶಾಲಾ ಮುಖ್ಯೋಪಾಧ್ಯಾಯಿನಿ ಸುಮಿತ್ರಾ ಡಿ ಪಡುಕೋಣೆ, ಸಮೃದ್ಧ ಬೈಂದೂರು ತಂಡದ ಸಂಯೋಜಕ ಶೋಧನ್ ಮಲ್ಪೆ ಉಪಸ್ಥಿತರಿದ್ದರು.
ಹಯ್ಯಂಗಾರ್ ಅಂಗನವಾಡಿ ಕೇಂದ್ರಕ್ಕೆ ಕ್ರೀಡಾ ಸಾಮಾಗ್ರಿಗಳನ್ನು ಸ್ವಯಂಸ್ಪೂರ್ತಿ ಫೌಂಡೇಶನ್ ವತಿಯಿಂದ ವಿತರಿಸಲಾಯಿತು. ಸ್ವಯಂಸ್ಫೂರ್ತಿ ಫೌಂಡೇಶನ್ ಸಂಸ್ಥಾಪಕರಾದ ನಾಗರಾಜ ಶೆಟ್ಟಿ ಜಡ್ಕಲ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಮೊಬೈಲ್, ಇಂಟರ್ನೆಟ್ ಸೌಲಭ್ಯವಿಲ್ಲದ ಕಡು ಗ್ರಾಮೀಣ ಪ್ರದೇಶವಾದ ಹಯ್ಯಂಗಾರ್ ಶಾಲೆಯಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಸ್ಮಾರ್ಟ್ ಕ್ಲಾಸ್ ಶಿಕ್ಷಣ ಒದಗಿಸಲು ಕಂಪ್ಯೂಟರ್ ಮತ್ತು ಪೀಠೋಪಕರಣಗಳು, ಗ್ರಂಥಾಲಯದ ವ್ಯವಸ್ಥೆ, ಕ್ರೀಡಾ ಸಾಮಾಗ್ರಿಗಳನ್ನು ನೀಡಲಾಗಿದೆ. ಇವೆಲ್ಲವುಗಳ ಸದುಪಯೋಗವನ್ನು ಎಲ್ಲಾ ವಿದ್ಯಾರ್ಥಿಗಳು ಶಿಕ್ಷಕರ ಸಹಾಯದಿಂದ ಪಡೆಯಲಿ ಎಂದು ತಿಳಿಸಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.