ಚಲನಚಿತ್ರ ನಟ ರಕ್ಷಿತ್ ಶೆಟ್ಟಿ ಕುಟುಂಬ ಸಮೇತರಾಗಿ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದರು. ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ ಮಾರಿಯಮ್ಮನ ಸನ್ನಿಧಾನದಲ್ಲಿ ಪ್ರಾರ್ಥಿಸಿ ಅಮ್ಮನ ಅನುಗ್ರಹ ಪ್ರಸಾದ ನೀಡಿದರು. ದೇವಳದ ಜೀರ್ಣೋದ್ದಾರದ ಆರ್ಥಿಕ ಸಮಿತಿ ಕಾತ್ಯಾಯಿನಿ ತಂಡದ ಮುಖ್ಯ ಸಂಚಾಲಕಿ ಬೀನಾ ವಿ.ಶೆಟ್ಟಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿಯನ್ನು ನೀಡಿದರು.
ನಟ ರಕ್ಷಿತ್ ಶೆಟ್ಟಿ ಕುಟುಂಬಸ್ಥರೊಂದಿಗೆ ದೇವಳದ ಜೀರ್ಣೋದ್ದಾರ ಕಾರ್ಯಗಳನ್ನು ವೀಕ್ಷಿಸಿದರು. ಈ ಸಂದರ್ಭ ರಶ್ಮಿತ್ ನಿಖಿಲ್ ಶೆಟ್ಟಿ ಕಾಪುವಿನ ಅಮ್ಮನ ಸ್ವರ್ಣ ಗದ್ದುಗೆಗೆ 9 ಗ್ರಾಂ ಸ್ವರ್ಣ ಸಮರ್ಪಿಸಿದರು. ರಕ್ಷಿತ್ ಶೆಟ್ಟಿ ಅವರ ತಾಯಿ ರಂಜನಾ ಶ್ರೀಧರ್ ಶೆಟ್ಟಿ ಮತ್ತು ಸಹೋದರ ರಂಜಿತ್ ಶೆಟ್ಟಿ ಉಪಸ್ಥಿತರಿದ್ದರು.