ವಿಜಯ ಕರ್ನಾಟಕ ಮಂಗಳೂರು ಆವೃತ್ತಿಯ ಸ್ಥಾನೀಯ ಸಂಪಾದಕ ಬಿ. ರವೀಂದ್ರ ಶೆಟ್ಟಿ ಅವರಿಗೆ ಹಸನ್ ಹವ್ವಾ ಫೌಂಡೇಶನ್ ಕುದೊಳಿ ಸಂಸ್ಥಾಪಕ ಅಬ್ದುಲ್ಲಾ ಮಾದು ಮೂಲೆ ನೀಡುವ ದತ್ತಿನಿಧಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕಾಸರಗೋಡಿನ ಸೀತಾಂಗೋಳಿ ಅಲಯನ್ಸ್ ಕನ್ವೆನ್ಶನ್ ಸೆಂಟರ್ನಲ್ಲಿ ನಡೆದ ದತ್ತಿನಿಧಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡ ಲಾಯಿತು.

ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಅವರ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್, ಕೆಯುಡಬ್ಲ್ಯುಜೆ ಕರ್ನಾಟಕ ರಾಜ್ಯ ಅಧ್ಯಕ್ಷ ಶಿವಾನಂದ ತಗಡೂರು, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಮಾಜಿ ಶಾಸಕ ಸೋಮಣ್ಣ ಬೇವಿನಮರದ, ಮಂಜೇಶ್ವರ ಶಾಸಕ ಎ.ಕೆ.ಎಂ.ಅಶ್ರಫ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.








































































































