ಬಂಟರ ಯಾನೆ ನಾಡವರ ಮಾತೃ ಸಂಘ (ರಿ) ಮಂಗಳೂರು ಪುತ್ತೂರು ತಾಲೂಕು ಸಮಿತಿ ಮಾರ್ಗದರ್ಶನದಲ್ಲಿ ಬಂಟರ ಸಂಘ ಪುತ್ತೂರು ತಾಲೂಕು (ರಿ) ಇದರ ಆಶ್ರಯದಲ್ಲಿ ಮಹಿಳಾ ಬಂಟರ ವಿಭಾಗ, ಯುವ ಬಂಟರ ವಿಭಾಗ, ವಿದ್ಯಾರ್ಥಿ ಬಂಟರ ವಿಭಾಗ ಇದರ ಸಹಕಾರದೊಂದಿಗೆ ಆಟಿಡೊಂಜಿ ಬಂಟೆರೆ ಸೇರಿಗೆ ಸಾಧಕರಿಗೆ ವಿವಿಧ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಪ್ರಧಾನ, ವಿದ್ಯಾರ್ಥಿ ವೇತನ, ಪ್ರತಿಭಾ ಪುರಸ್ಕಾರವು ದಿನಾಂಕ 10-08-2024 ರ ಶನಿವಾರ ಎಂ ಸುಂದರ್ ರಾಮ್ ಶೆಟ್ಟಿ ಸ್ಮಾರಕ ಬಂಟರ ಭವನ ಕೊಂಬೆಟ್ಟು ಪುತ್ತೂರು ಇಲ್ಲಿ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಬಂಟರ ಸಂಘದ ಮಾರ್ಗದರ್ಶಕರಾದ ಸವಣೂರು ಸೀತಾರಾಮ ರೈ ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಬಂಟರ ಸಂಘದ ನೂತನ ಅಧ್ಯಕ್ಷ ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕರಾದ ಕಾವು ಹೇಮನಾಥ ಶೆಟ್ಟಿ ಮಾತನಾಡಿ, ಒಟ್ಟು ತಾಲೂಕಿನ ಬಂಟ ಬಂಧುಗಳನ್ನು ಒಂದು ಕಡೆ ಸೇರಿಸುವ ಕಾರ್ಯಕ್ರಮ ಇದಾಗಿದೆ. ತಾಲೂಕಿನಲ್ಲಿ ಅದೆಷ್ಟೋ ಸಾಧಕರಿದ್ದಾರೆ. ಅವರನ್ನು ಗುರುತಿಸುವ ಕಾರ್ಯ ಆಗಬೇಕಾಗಿದೆ. ಜೊತೆಗೆ ತಾಲೂಕಿನ ಪ್ರತಿ ಬಂಟ ಮನೆಗಳಿಗೆ ಆಮಂತ್ರಣ ಪತ್ರಿಕೆ ತಲುಪಿಸುವ ಮೂಲಕ ಸಮಾಜ ಬಂಧುಗಳನ್ನು ಒಟ್ಟು ಸೇರಿಸುವ ಕೆಲಸ ಆಗಲಿದೆ. ಈ ಕಾರ್ಯಕ್ರಮದಲ್ಲಿ ಪ್ರಮುಖರಾದ ಮೂರು ಜನ ಡಾಕ್ಟರೇಟ್ ಪಡೆದ ಕೆ. ಪ್ರಕಾಶ್ ಶೆಟ್ಟಿ ಸಿಎಂಡಿ ಎಂ ಆರ್ ಜಿ ಗ್ರೂಪ್ಸ್, ನೂತನ ಸಂಸದರಾಗಿ ಆಯ್ಕೆಯಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಅಬುದಾಭಿಯ ಮಿತ್ರಂಪಾಡಿ ಜಯರಾಮ್ ರೈ ಇವರನ್ನು ಸನ್ಮಾನಿಸಲಾಗುತ್ತದೆ. ಆಗಸ್ಟ್ 10 ಶನಿವಾರ ನಡೆಯುವ ಕಾರ್ಯಕ್ರಮ ಮಧ್ಯಾಹ್ನ 2.30 ಕ್ಕೆ ಆರಂಭಗೊಂಡು ನಿರಂತರವಾಗಿ ಸಾಂಸ್ಕೃತಿಕ ಕಾರ್ಯಕ್ರಮ, ಸಾಧಕ ಸನ್ಮಾನ, ಸಭಾ ಕಾರ್ಯಕ್ರಮ, ಗೌರವಾರ್ಪಣೆ ಮೂಲಕ ನಡೆಯಲಿದ್ದು ಜಾಗತಿಕ ಬಂಟರ ಸಂಘ ಸೇರಿ ಉದ್ಯಮಿಗಳು, ಬಂಟ ಸಮಾಜದ ಗಣ್ಯರ ಉಪಸ್ಥಿತಿಯಲ್ಲಿ ನಡೆಯಲಿದೆ ಎಂದರು.
ದಂಬೆಕ್ಕಾನ ಸದಾಶಿವ ರೈ ಮಾತನಾಡಿ, ಮಹಾಲಿಂಗೇಶ್ವರ ದೇವರ ಆಶೀರ್ವಾದದಿಂದ ಈ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲಿ. ಸಮಾಜ ಬಂಧುಗಳು ಒಟ್ಟು ಸೇರುವ ಒಂದು ಮಹೋನ್ನತ ಕಾರ್ಯಕ್ರಮ ಇದಾಗಲಿದೆ ಎಂದು ಹಾರೈಸಿದರು. ಕಾರ್ಯಕ್ರಮದಲ್ಲಿ ಮಾತೃ ಸಂಘದ ನಿರ್ದೇಶಕರುಗಳು, ಪ್ರಮುಖರು, ಪುತ್ತೂರು ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ ಮನವಳಿಕೆ, ಕೋಶಾಧಿಕಾರಿ ಸಂತೋಷ್ ಕುಮಾರ್ ಶೆಟ್ಟಿ ಎಸ್, ನಿರ್ದೇಶಕರುಗಳು, ವಲಯ ಸಂಚಾಲಕರು, ಮಹಿಳಾ ಬಂಟರ ವಿಭಾಗದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸಮಾಜ ಬಾಂಧವರು ಉಪಸ್ಥಿತರಿದ್ದರು.