ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್ ನಲ್ಲಿ ಸಾರ್ವಜನಿಕ ಗಣೇಶೋತ್ಸವದ ಅಂಗವಾಗಿ ನಡೆದ ಬಂಟ ಕ್ರೀಡೋತ್ಸವ – 2024 ರಲ್ಲಿ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಸುರತ್ಕಲ್ ಬಂಟರ ಸಂಘದ ಮಹಿಳೆಯರ ತಂಡ ಪ್ರಥಮ ಮತ್ತು ದ್ವಿತೀಯ ಸ್ಥಾನವನ್ನು ಪಡದುಕೊಂಡಿದೆ. ಜಿದ್ದಾಜಿದ್ದಿನ ಫೈನಲ್ ಪಂದ್ಯದಲ್ಲಿ ಮಹಿಳೆಯರ ಬಿ ತಂಡ ಎ ತಂಡವನ್ನು ಸೋಲಿಸಿ 25 ಸಾವಿರ ನಗದು ಮತ್ತು ಪ್ರಶಸ್ತಿಯನ್ನು ಪಡೆಯಿತು. ಎ ತಂಡ 15 ಸಾವಿರ ನಗದು ಮತ್ತು ಪ್ರಶಸ್ತಿಯೊಂದಿಗೆ ರನ್ನರ್ಸ್ ಅಪ್ ಪ್ರಶಸ್ತಿ ಪಡೆಯಿತು.
ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಪ್ರಶಸ್ತಿ ವಿತರಿಸಿದರು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ಬಿ. ನಾಗರಾಜ ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಉಪಾಧ್ಯಕ್ಷ ಹೇಮನಾಥ ಶೆಟ್ಟಿ ಕಾವು, ಪ್ರಧಾನ ಕಾರ್ಯದರ್ಶಿ ಕೆ.ಎಂ.ಶೆಟ್ಟಿ, ಕೋಶಾಧಿಕಾರಿ ಸಿಎ ರಾಮ ಮೋಹನ್ ರೈ, ಸಿದ್ಧಿ ವಿನಾಯಕ ಪ್ರತಿಷ್ಠಾನದ ಟ್ರಸ್ಟಿಗಳಾದ ಡಾ. ಆಶಾಜ್ಯೋತಿ ರೈ, ರವಿರಾಜ್ ಶೆಟ್ಟಿ ನಿಟ್ಟೆಗುತ್ತು, ಶೆಡ್ಡೆ ಮಂಜುನಾಥ್ ಭಂಡಾರಿ, ಕೃಷ್ಣ ಪ್ರಸಾದ್ ರೈ, ತಾಲೂಕು ಸಮಿತಿಯ ಅಧ್ಯಕ್ಷ ವಸಂತ ಶೆಟ್ಟಿ, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು, ನಿಕಟಪೂರ್ವ ಅಧ್ಯಕ್ಷ ಸುಧಾಕರ ಪೂಂಜ, ಸಂಘದ ಉಪಾಧ್ಯಕ್ಷ ಪುಷ್ಪರಾಜ ಶೆಟ್ಟಿ ಕುಡುಂಬೂರು, ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ ಕಟ್ಲ, ಕೋಶಾಧಿಕಾರಿ ಅವಿನಾಶ್ ಶೆಟ್ಟಿ, ಮಾಜಿ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಶೆಟ್ಟಿ, ಮಹಿಳಾ ವೇದಿಕೆಯ ಅಧ್ಯಕ್ಷೆ ಭವ್ಯಾ ಶೆಟ್ಟಿ, ಕ್ರೀಡಾ ಕಾರ್ಯದರ್ಶಿಗಳಾದ ಬಬಿತಾ ಶೆಟ್ಟಿ, ಶಿಶಿರ್ ಶೆಟ್ಟಿ, ಗುಣಶೇಖರ ಶೆಟ್ಟಿ ಉಪಸ್ಥಿತರಿದ್ದರು.