ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಮತ್ತು ಯನಪೋಯ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ದೇರಳಕಟ್ಟೆಯಲ್ಲಿ ಜರುಗಿದ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಹುಡುಗರ ವಿಭಾಗದಲ್ಲಿ 5 ಚಿನ್ನ, 3 ಬೆಳ್ಳಿ ಹಾಗೂ 1 ಕಂಚು ಒಟ್ಟು 9 ಪದಕ ಪಡೆದು ಪ್ರಥಮ ಸ್ಥಾನವನ್ನು ಪಡೆದುಕೊಂಡರು.
ಹುಡುಗಿಯರ ವಿಭಾಗದಲ್ಲಿ 5 ಚಿನ್ನ, 3 ಬೆಳ್ಳಿ ಹಾಗೂ 2 ಕಂಚು ಒಟ್ಟು 10 ಪದಕ ಪಡೆದು ಪ್ರಥಮ ಸ್ಥಾನವನ್ನು ಪಡೆದುಕೊಂಡರು. ವಿಜೇತ ಕ್ರೀಡಾಪಟುಗಳಿಗೆ ಸಂಸ್ಥೆಯ ಅಧ್ಯಕ್ಷ ಡಾ.ಎಂ ಮೋಹನ ಆಳ್ವರು ಅಭಿನಂದಿಸಿದ್ದಾರೆ.