ಆರೋಗ್ಯವೇ ಭಾಗ್ಯ ಎನ್ನುವಂತೆ ನಮ್ಮ ಆರೋಗ್ಯವನ್ನು ಪ್ರಕೃತಿಯ ಬದಲಾವಣೆಗನುಗುಣವಾಗಿ ಕಾಪಾಡಿಕೊಳ್ಳುವುದು ನಮ್ಮ ಕರ್ತವ್ಯ. ದಿನ ನಿತ್ಯದ ಜೀವನದಲ್ಲಿ ಪ್ರಾಯಕ್ಕೆ ಅನುಗುಣವಾಗಿ ಶರೀರಕ್ಕೆ ಆಗುವ ತ್ರಾಸದಾಯಕ ಸನ್ನಿವೇಶಳಿಗೆ ಹೊಂದಿಕೊಳ್ಳಬೇಕು. ಹಿರಿ ಪ್ರಾಯದಲ್ಲಿ ಒತ್ತಡಕ್ಕೆ ಒಳಗಾಗುವುದು ಸರ್ವೇ ಸಾಮಾನ್ಯ. ಆದರೆ ತಾಳ್ಮೆಯಿಂದ ವ್ಯವಹರಿಸುವ ಗುಣ ನಮ್ಮಲ್ಲಿರಬೇಕು. ವ್ಯಾಯಮ, ಕ್ರೀಡೆ ಮತ್ತು ಚಟುವಟಿಕೆಯಿಂದ ಇರುವ ಮೂಲಕ ಒತ್ತಡ ಕಡಿಮೆ ಮಾಡಿಕೊಳ್ಳಬೇಕು. ಇಂದಿನ ಯಾಂತ್ರಿಕ ಜೀವನದಲ್ಲಿ ಯುವ ಮಕ್ಕಳು ಕೂಡಾ ಒತ್ತಡಕ್ಕೆ ಒಳಾಗಾಗುವುದನ್ನು ನಾವು ಕಾಣುತ್ತೇವೆ. ಇದು ಇಂದಿನ ಜೀವನ ಪದ್ದತಿಯಿಂದ ಆಗುವ ಪರಿಣಾಮಗಳಾಗಿವೆ. ಪ್ರಕೃತಿಯ ಬದಲಾವಣೆಗೆ ಹೊಂದಿಕೊಂಡು ದೈಹಿಕ ಮಾನಸಿಕ ಯೋಗ ಕ್ಷೇಮದೊಂದಿಗೆ ಆರೋಗ್ಯ ಕಾಪಾಡಿಕೊಳ್ಳುವ ದೃಡತೆ ನಮ್ಮಲ್ಲಿರಬೇಕು ಎಂದು ಪುಣೆಯ ಖ್ಯಾತ ವೈದ್ಯರಾದ ಡಾ. ಚಿತ್ತರಂಜನ್ ಶೆಟ್ಟಿ ನುಡಿದರು.
ಬಂಟ್ಸ್ ಅಸೋಸಿಯೇಷನ್ ಪುಣೆ ಇದರ ವತಿಯಿಂದ ನವರಾತ್ರಿಯ ಪ್ರಯುಕ್ತ ವಾರ್ಷಿಕ ದಸರಾ ಪೂಜೆ, ತೆನೆ ಹಬ್ಬ ಹಾಗೂ ದಾಂಡಿಯಾ ರಾಸ್ ಧಾರ್ಮಿಕ ಕಾರ್ಯಕ್ರಮವು ಅಕ್ಟೋಬರ್ 11 ರಂದು ಪುಣೆಯ ಕ್ಯಾಂಪ್ ನಲ್ಲಿಯ ಪೂನಾ ಕ್ಲಬ್ ಸಿನೆಮಾ ಹಾಲ್ ನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸಭಾ ಕಾರ್ಯಕ್ರಮಗಳೊಂದಿಗೆ ಜರಗಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದ ಡಾ ಚಿತ್ತರಂಜನ್ ಶೆಟ್ಟಿಯವರು, ನಮ್ಮ ಕಲೆ ಸಂಸ್ಕ್ರತಿ ಸಂಸ್ಕಾರವನ್ನು ಯುವ ಜನತೆಗೆ ತಿಳಿಸುವ ಇಂತಹ ಧಾರ್ಮಿಕ ಕಾರ್ಯಕ್ರಮಗಳ ಅಗತ್ಯತೆ ಇದೆ. ಬಂಟ್ಸ್ ಅಸೋಸಿಯೇಷನ್ ನ ಅಧ್ಯಕ್ಷರಾದ ರೋಹಿತ್ ಶೆಟ್ಟಿಯವರ ಮುಂದಾಳತ್ವದಲ್ಲಿ ಈ ಸಂಸ್ಥೆ ಧಾರ್ಮಿಕತೆಯನ್ನು ಮೈಗೂಡಿಸಿಕೊಂಡು ಸಮಾಜ ಸೇವೆಯಲ್ಲಿ ಮಹತ್ತರ ಬದಲಾವಣೆಯೊಂದಿಗೆ ಸಮಾಜಕ್ಕೆ ಮಾದರಿಯಾಗಿ ಕೆಲಸ ಮಾಡಲಿ ಎಂದು ಶುಭ ಹಾರೈಸುತ್ತೇನೆ ಎಂದರು.
ಪುಣೆ ಬಂಟ್ಸ್ ಅಸೋಸಿಯೇಷನ್ ನ ಅಧ್ಯಕ್ಷರಾದ ರೋಹಿತ್ ಶೆಟ್ಟಿ ನಗ್ರಿಗುತ್ತುರವರ ಅಧ್ಯಕ್ಷತೆಯಲ್ಲಿ ಜರಗಿದ ದಸರಾ ತೆನೆ ಹಬ್ಬದ ಧಾರ್ಮಿಕ ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ಗೌರವ ಅತಿಥಿಗಳಾದ ಪಿಂಪ್ರಿ ಚಿಂಚ್ವಾಡ್ ಬಂಟರ ಸಂಘದ ಮಹಿಳಾ ಅಧ್ಯಕ್ಷೆ ಪ್ರಭಾ ಎಸ್ ಶೆಟ್ಟಿ, ಸಂಘದ ನಿಕಟಪೂರ್ವ ಅಧ್ಯಕ್ಷರಾದ ಗಣೇಶ್ ಹೆಗ್ಡೆ ಪುಣ್ಚೂರು, ಉಪಾಧ್ಯಕ್ಷರುಗಳಾದ ಡಾ ಸುಧಾಕರ್ ಶೆಟ್ಟಿ, ಸತೀಶ್ ರೈ ಕಲ್ಲಂಗಳ ಗುತ್ತು, ಪ್ರಧಾನ ಕಾರ್ಯದರ್ಶಿ ದಿನೇಶ್ ಶೆಟ್ಟಿ ಪೆಲತ್ತೂರು ಮೇಲ್ಮನೆ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರೇಷ್ಮಾ ಅರ್ ಶೆಟ್ಟಿ, ನಿಕಟಪೂರ್ವ ಕಾರ್ಯಾಧ್ಯಕ್ಷೆ ಉಷಾ ಯು ಶೆಟ್ಟಿ, ಸಾಂಸ್ಕ್ರತಿಕ ವಿಭಾಗದ ಕಾರ್ಯಾಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯದರ್ಶಿ ಶರ್ಮಿಳಾ ಟಿ ರೈ, ಯುವ ವಿಭಾಗದ ಕಾರ್ಯಾಧ್ಯಕ್ಷ ಅದೀಪ್ ಶೆಟ್ಟಿಯವರು ಉಪಸ್ಥಿತರಿದ್ದರು.
ಅಧ್ಯಕ್ಷರು ಮತ್ತು ಅತಿಥಿ ಗಣ್ಯರು ದೀಪ ಪ್ರಜ್ವಲಿಸಿ ದಸರಾ ಪೂಜೆ, ತೆನೆ ಹಬ್ಬ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶ್ರೀಮತಿ ಲತಾ ಎಸ್ ಶೆಟ್ಟಿ ಪ್ರಾರ್ಥನೆಗೈದರು. ಗಣೇಶ್ ಹೆಗ್ಡೆ ಪುಣ್ಚೂರುರವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಅತಿಥಿ ಗಣ್ಯರನ್ನು ಅಧ್ಯಕ್ಷ ರೋಹಿತ್ ಶೆಟ್ಟಿ ನಗ್ರಿಗುತ್ತು ಮತ್ತು ಮಹಿಳಾ ಅಧ್ಯಕ್ಷೆ ರೇಷ್ಮಾ ಅರ್ ಶೆಟ್ಟಿಯವರು ಶಾಲು ಪುಷ್ಪ ಗುಚ್ಛ, ಸ್ಮರಣಿಕೆ ನೀಡಿ ಗೌರವಿಸಿದರು. ಅತಿಥಿ ಗಣ್ಯರ ಪರಿಚಯವನ್ನು ಕ್ರಮವಾಗಿ ಶರ್ಮಿಳಾ ಟಿ ರೈ ಮತ್ತು ಅಕ್ಷತಾ ಸಿ ಶೆಟ್ಟಿಯವರು ಓದಿದರು. ಧಾರ್ಮಿಕ ಕಾರ್ಯಕ್ರಮವಾಗಿ ರಾಘವೇಂದ್ರ ಭಟ್ ರವರ ಪೌರೋಹಿತ್ಯದಲ್ಲಿ ದುರ್ಗಾ ಪೂಜೆ ನೆರವೇರಿತು. ಸಂಘದ ಅಧ್ಯಕ್ಷರು, ಅತಿಥಿ ಗಣ್ಯರು, ಮಹಿಳಾ ವಿಭಾಗದ ಅಧ್ಯಕ್ಷರು, ಮಾಜಿ ಅಧ್ಯಕ್ಷರುಗಳು ಮತ್ತು ಸರ್ವ ಸದಸ್ಯರು ಶ್ರೀದೇವಿಯ ಅಲಂಕೃತ ಮೂರ್ತಿಗೆ ದೀಪ ಬೆಳಗಿಸಿ ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಹಿಳಾ ವಿಭಾಗದ ಸದಸ್ಯೆಯರು ದೇವಿಗೆ ಮಂಗಳಾರತಿ ಬೆಳಗಿದರು. ಅಸೋಸಿಯೇಷನ್ ಅಧ್ಯಕ್ಷರಾದ ರೋಹಿತ್ ಶೆಟ್ಟಿಯವರು ಭತ್ತದ ತೆನೆಗೆ ಹಾಲೆರೆದು ಪೂಜೆ ಸಲ್ಲಿಸಿ ಸಮಾಜ ಬಾಂಧವರಿಗೆ ತೆನೆ ವಿತರಿಸಿದರು. ಮಹಿಳಾ ವಿಭಾಗದ ಸದಸ್ಯರು ದೇವಿಯನ್ನು ಅರಾದಿಸುವ ಸ್ತುತಿಯೊಂದಿಗೆ ನೃತ್ಯಗೈದರು. ಸಂಘದ ಮಹಿಳೆಯರಿಂದ ಮತ್ತು ಯುವ ವಿಭಾಗದ ಸದಸ್ಯರಿಂದ ವಿಶೇಷ ದಾಂಡಿಯಾ ನೃತ್ಯ ಪ್ರದರ್ಶನಗೊಂಡಿತು. ನಂತರ ಮಕ್ಕಳು ಮಹಿಳೆಯರು ಪುರುಷರು ಸೇರಿದಂತೆ ದಾಂಡಿಯಾ ನೃತ್ಯಕ್ಕೆ ಹೆಜ್ಜೆ ಹಾಕಿದರು.
ಈ ದಸರಾ ಕಾರ್ಯಕ್ರಮದಲ್ಲಿ ಶ್ರೀ ಅಯಪ್ಪ ಸ್ವಾಮಿ ದೇವಸ್ಥಾನ ಕಾತ್ರಜ್ ಇದರ ಜೀರ್ಣೋದ್ದಾರ ಸಮಿತಿಯ ಗೌರವಾಧ್ಯಕ್ಷ ಸದಾನಂದ ಕೆ ಶೆಟ್ಟಿ, ಪುಣೆ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು, ಪಿಂಪ್ರಿ ಚಿಂಚ್ವಾಡ್ ಬಂಟರ ಸಂಘದ ಅಧ್ಯಕ್ಷ ಜಗದೀಶ್ ಶೆಟ್ಟಿ, ಶ್ರೀ ಗುರುದೇವಾ ಸೇವಾ ಬಳಗದ ಅಧ್ಯಕ್ಷ ಪ್ರಭಾಕರ್ ವಿ ಶೆಟ್ಟಿ, ಪುಣೆ ತುಳುಕೂಟದ ಅಧ್ಯಕ್ಷ ದಿನೇಶ್ ಶೆಟ್ಟಿ ಕಳತ್ತೂರು, ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿಯ ಅಧ್ಯಕ್ಷ ಪ್ರವೀಣ್ ಶೆಟ್ಟಿ ಪುತ್ತೂರು, ಬಂಟರ ಸಂಘ ಪೂರ್ವ ಪ್ರಾದೇಶಿಕ ಸಮಿತಿಯ ಸಮನ್ವಯಕರಾದ ಸುಧೀರ್ ಶೆಟ್ಟಿ ಕಣಂಜಾರು, ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಂಘ ಕಾತ್ರಜ್ ನ ಅಧ್ಯಕ್ಷ ಸುಭಾಶ್ ಶೆಟ್ಟಿ, ಪಿಂಪ್ರಿ ತುಳು ಸಂಘದ ಅಧ್ಯಕ್ಷ ಹರೀಶ್ ಶೆಟ್ಟಿ ಕುರ್ಕಾಲ್, ಪುಣೆ ಬಂಟರ ಸಂಘದ ಮಹಿಳಾ ವಿಭಾಗದ ಅಧ್ಯಕ್ಷೆ ಸುಲತಾ ಎಸ್ ಶೆಟ್ಟಿ, ಪುಣೆ ಶ್ರೀ ವಜ್ರಮಾತ ಮಹಿಳಾ ವಿಕಾಸ ಕೇಂದ್ರದ ಅಧ್ಯಕ್ಷೆ ಜಯಲಕ್ಷ್ಮಿ ಪಿ ಶೆಟ್ಟಿ, ಪುಣೆ ತುಳುಕೂಟದ ಕಾರ್ಯಾಧ್ಯಕ್ಷೆ ಪ್ರಿಯಾ ಎಚ್ ದೇವಾಡಿಗ, ಪುಣೆ ಬಂಟರ ಸಂಘ ದಕ್ಷಿಣ ಉತ್ತರ ಪೂರ್ವ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷರುಗಳಾದ ಶೇಖರ್ ಶೆಟ್ಟಿ, ನಾರಾಯಣ ಹೆಗ್ಡೆ, ಸುನಿಲ್ ಶೆಟ್ಟಿ, ಕಾರ್ಯಾಧ್ಯಕ್ಷೆಯರುಗಳಾದ ಯಶೋದಾ ಶೆಟ್ಟಿ, ಪ್ರೇಮ ಶೆಟ್ಟಿ, ಕೃತಿ ಶೆಟ್ಟಿಯವರನ್ನು ಪುಷ್ಪ ಗುಚ್ಚ ನೀಡಿ ಗೌರವಿಸಲಾಯಿತು.
ನಾರಿಗೊಂದು ಸೀರೆ ಪ್ರದರ್ಶನವು ಮಹಿಳೆಯರಿಗಾಗಿ ಆಯೋಜಿಸಲಾಗಿತ್ತು. ವಿಜೇತರಾದವರಿಗೆ ಸೀರೆ ನೀಡಿ ಗೌರವಿಸಲಾಯಿತು. ಸಂಘದ ಮಾಜಿ ಅಧ್ಯಕ್ಷೆ ಸುಜಾತಾ ಸುಬಾಶ್ಚಂದ್ರ ಹೆಗ್ಡೆ ಇದರ ಪ್ರಾಯೋಜಕತ್ವವನ್ನು ವಹಿಸಿಕೊಂಡರು. ಉತ್ತಮ ವಸ್ತ್ರ ವಿನ್ಯಾಸದ ಪುರುಷ ಮತ್ತು ಮಹಿಳೆಯರು ಹಾಗೂ ಬೆಸ್ಟ್ ಕಪಲ್ ಪ್ರಶಸ್ತಿಯನ್ನು ನೀಡಲಾಯಿತು. ಅಸೋಸಿಯೇಷನ್ ಮಾಜಿ ಅಧ್ಯಕ್ಷರುಗಳಾದ ಸುಭಾಶ್ಚಂದ್ರ ಹೆಗ್ಡೆ ಕಟ್ಟಿಂಗೇರಿ, ನಾರಾಯಣ ಶೆಟ್ಟಿ, ಆನಂದ ಶೆಟ್ಟಿ ಮಿಯ್ಯಾರ್, ಕೋಶಾಧಿಕಾರಿ ಸಿಎ ಮನೋಹರ್ ಶೆಟ್ಟಿ, ಸಮಿತಿ ಪದಾಧಿಕಾರಿಗಳಾದ ಪ್ರದೀಪ್ ಶೆಟ್ಟಿ, ತಾರಾನಾಥ್ ರೈ ಸೂರಂಬೈಲ್, ರಕ್ಷಿತ್ ಶೆಟ್ಟಿ, ಮಹೇಶ್ ಹೆಗ್ಡೆ ಪೊಳಲಿ, ರವೀಂದ್ರ ಶೆಟ್ಟಿ, ಸುರೇಶ ಶೆಟ್ಟಿ ಗಂದರ್ವ, ಸುರೇಶ್ ಎಲ್ ಶೆಟ್ಟಿ, ಅಶೋಕ್ ಶೆಟ್ಟಿ, ಉದಯ್ ಶೆಟ್ಟಿ, ಸತೀಶ್ ಶೆಟ್ಟಿ, ಶ್ರೀನಿವಾಸ್ ರೈ, ಯಶವಂತ್ ಶೆಟ್ಟಿ, ಮಹಿಳಾ ವಿಭಾಗದ ಮಾಜಿ ಅಧ್ಯಕ್ಷೆಯರುಗಳಾದ ಸುಜಾತ ಎಸ್ ಹೆಗ್ಡೆ, ಸರೋಜಿನಿ ಜೆ ಶೆಟ್ಟಿ, ಸುಧಾ ಎನ್ ಶೆಟ್ಟಿ, ಮಲ್ಲಿಕಾ ಎ ಶೆಟ್ಟಿ, ದೀಪಾ ಎ ರೈ, ಮಹಿಳಾ ವಿಭಾಗದ ಪ್ರಮುಖರಾದ ಸೌಮ್ಯ ಅರ್ ಶೆಟ್ಟಿ, ಶಾಲಿನಿ ಎಂ ಶೆಟ್ಟಿ, ಪೂರ್ಣಿಮಾ ಎ ಶೆಟ್ಟಿ, ಪ್ರೀತಿ ಬಿ ಶೆಟ್ಟಿ, ರೂಪಾ ಜೆ ಶೆಟ್ಟಿ, ಶ್ರದ್ದಾ ವೈ ಶೆಟ್ಟಿ, ಭವ್ಯರಾಣಿ ಎಸ್ ಶೆಟ್ಟಿ, ಆಶಾಲತ ಅರ್ ಶೆಟ್ಟಿ, ಅಶ್ವಿನಿ ವಿ ಶೆಟ್ಟಿ, ಆಶಾ ಡಿ ಶೆಟ್ಟಿ, ಶೈಲಜಾ ಯು ಶೆಟ್ಟಿ, ಸ್ನೇಹಾ ಎಸ್ ಶೆಟ್ಟಿ, ವಸುಧಾ ಎಸ್ ಶೆಟ್ಟಿ ಮತ್ತು ಯುವ ವಿಭಾಗದ ಸದಸ್ಯರುಗಳು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.
ಈ ದಸರಾ ಹಬ್ಬದ ಧಾರ್ಮಿಕ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯ ಸಮಾಜ ಬಾಂಧವರು ಶ್ರೀ ದುರ್ಗಾ ದೇವಿಯ ಪೂಜೆಯಲ್ಲಿ ಪಾಲ್ಗೊಂಡು ಶ್ರೀ ದೇವಿಯ ಕೃಪೆಗೆ ಪಾತ್ರರಾದರು. ಅಸೋಸಿಯೇಷನ್ ನ ಮಹಿಳಾ ವಿಭಾಗದ ಸಾಂಸ್ಕ್ರತಿಕ ಕಾರ್ಯಾಧ್ಯಕ್ಷೆ ಶಾಲಿನಿ ಎಂ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಶರ್ಮಿಳಾ ಟಿ ರೈ ದಾಂಡಿಯಾ ಕಾರ್ಯಕ್ರಮ ನಡೆಸಿಕೊಟ್ಟರು. ಸಂಘದ ಪ್ರಧಾನ ಕಾರ್ಯದರ್ಶಿ ದಿನೇಶ್ ಶೆಟ್ಟಿ ಪೆಲತ್ತೂರು ಮೇಲ್ಮನೆ ಧನ್ಯವಾದಗೈದರು
ಚಿತ್ರ, ವರದಿ : ಹರೀಶ್ ಮೂಡಬಿದಿರೆ