ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರಕಾಲೇಜು ಬ್ಯಾಡ್ಮಿಂಟನ್ ಟೂರ್ನಿಯ ಪುರುಷರ ವಿಭಾಗದಲ್ಲಿ ಸತತ ೧೬ನೇ ಬಾರಿ ಚಾಂಪಿಯನ್ ಆಗಿರುವ ಆಳ್ವಾಸ್ ಕಾಲೇಜು ತಂಡವು ‘ಶ್ರೀ ಕೆಮ್ಮಾರು ಬಾಲಕೃಷ್ಣ ಗೌಡ ಸ್ಮರಣಾರ್ಥ ಟ್ರೋಫಿ’ಯನ್ನು ಎತ್ತಿ ಹಿಡಿದಿದೆ.
ಮಹಿಳಾ ವಿಭಾಗದಲ್ಲಿ ಆಳ್ವಾಸ್ ಕಾಲೇಜು ತೃತೀಯ ಸ್ಥಾನ ಪಡೆದಿದೆ.
ಮಂಗಳೂರಿನ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಶ್ರಯದಲ್ಲಿ ನಡೆದ ಟೂರ್ನಿಯ ಪುರುಷರ ವಿಭಾಗದ ಫೈನಲ್ನಲ್ಲಿ ಆಳ್ವಾಸ್ ಕಾಲೇಜು ತಂಡವು ೩-೦ ನೇರ ಸೆಟ್ಗಳಿಂದ ಪ್ರೇರಣಾ ಕಾಲೇಜು ತಂಡವನ್ನು ಮಣಿಸಿ, ಪ್ರಶಸ್ತಿಯನ್ನು ತನ್ನಲ್ಲಿ ಉಳಿಸಿಕೊಂಡಿತು. ಉತ್ತಮ ಪ್ರದರ್ಶನ ನೀಡಿದ ಮಹಿಳಾ ತಂಡವು ತೃತೀಯ ಸ್ಥಾನ ಪಡೆಯಿತು.
ಸಾಧನೆ ಮಾಡಿದ ಕ್ರೀಡಾಪಟುಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.