ಬ್ರಹ್ಮಾವರ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ ನಲ್ಲಿ ಅಕ್ಟೋಬರ್ 25 ರಂದು ಚಿಣ್ಣರ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು. ಜಿ ಎಮ್ ಛತ್ರಛಾಯದಲ್ಲಿ ಪ್ರಿ ನರ್ಸರಿಯಿಂದ ಎರಡನೇ ತರಗತಿಯವರೆಗಿನ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಅತ್ಯಂತ ಆಸಕ್ತಿಯಿಂದ ಪಾಲ್ಗೊಂಡು ಕ್ರೀಡಾಸ್ಫೂರ್ತಿಯನ್ನು ಮೆರೆದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಉಡುಪಿಯ ಮಿತ್ರ ಆಸ್ಪತ್ರೆಯಲ್ಲಿ ದಂತ ತಜ್ಞೆಯಾಗಿ ಕಾರ್ಯನಿರ್ವಹಿಸುತ್ತಿರುವ ಜಿ ಎಮ್ ನ ಹಳೆ ವಿದ್ಯಾರ್ಥಿನಿ ಡಾ. ತ್ರಿಶಾ ಹೆಗ್ಡೆ ಆಗಮಿಸಿದ್ದರು.
ಅವರು ಜ್ಯೋತಿಯನ್ನು ಬೆಳಗಿಸಿ ಕ್ರೀಡಾಕೂಟಕ್ಕೆ ಚಾಲನೆಯನ್ನು ನೀಡಿ ಮಾತನಾಡಿ, ಮಕ್ಕಳು ಬಾಲ್ಯದಲ್ಲಿ ತಮ್ಮನ್ನು ತಾವು ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳಲು ಪೆÇೀಷಕರು ಉತ್ತೇಜಿಸಬೇಕೆಂದರು. ಶಾಲಾ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ಶಾಲಾ ಧ್ವಜವನ್ನು ಅರಳಿಸಿ ಮಾತನಾಡಿ ಕ್ರೀಡೆಗಳಿಂದ ಸಾಮಾಜಿಕ, ನೈತಿಕ ಮೌಲ್ಯಗಳ ಕಲಿಕೆಯಾಗುತ್ತದೆ ಜೊತೆಗೆ ಬದುಕಿಗೆ ಬೇಕಾದ ಜೀವನ ಮೌಲ್ಯಗಳು ವೃದ್ಧಿಯಾಗುತ್ತದೆ ಎಂದರು.
ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಎಲ್ಲಾ ಪುಟಾಣಿ ಮಕ್ಕಳಿಗೆ ಶುಭಹಾರೈಸಿ, ತಮ್ಮ ಮಕ್ಕಳನ್ನು ಪೆÇ್ರೀತ್ಸಾಹಿಸಲು ಆಗಮಿಸಿದ ಪೆÇೀಷಕರಿಗೆ ಅಭಿನಂದನೆ ಸಲ್ಲಿಸಿದರು. ನಂತರ ವಿದ್ಯಾರ್ಥಿಗಳ ಜೀವನದಲ್ಲಿ ಅಂಕಗಳ ಜೊತೆಗೆ ಸ್ಪೋರ್ಟ್ಸ್ ಕೂಡ ತುಂಬಾ ಮುಖ್ಯ. ಜಿ ಎಮ್ ಸಂಸ್ಥೆ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗಾಗಿ ಹಲವಾರು ಚಟುವಟಿಕೆಗಳನ್ನು ಆಯೋಜಿಸಿಕೊಂಡು ಬರುತ್ತಿದೆ, ಇದಕ್ಕೆ ಪೆÇೀಷಕರು ನಿರಂತರ ಪೆÇ್ರೀತ್ಸಾಹಿಸಬೇಕೆಂದರು. ಪೆÇೀಷಕರಿಗೆ ಚುಟುಕು ಮನೋರಂಜನ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ವಿಜೇತ ಪುಟಾಣಿ ಕ್ರೀಡಾಳುಗಳಿಗೆ ಬಹುಮಾನ ವಿತರಿಸಲಾಯಿತು. ಕ್ರೀಡಾಕೂಟದಲ್ಲಿ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆಯಾಗಿರುವ ಡಾ. ಅನುಷಾ ಸುಬ್ರಹ್ಮಣ್ಯಂ, ಪೆÇೀಷಕರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.