ಮಹತೋಭಾರ ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಉಡುಪಿ ಸಾಯಿರಾಧಾ ಸಮೂಹ ಸಂಸ್ಥೆಯ ಆಡಳಿತ ನಿರ್ದೇಶಕ ಮನೋಹರ್ ಎಸ್. ಶೆಟ್ಟಿ ಕಾಪು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೇಗುಲದ ಆಡಳಿತಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅರುಣ್ ಕುಮಾರ್ ಬಿ.ಕೆ. ಹಾಗೂ ವ್ಯವಸ್ಥಾಪನಾ ಸಮಿತಿಗೆ ಆಯ್ಕೆಯಾದ ನೂತನ ಸದಸ್ಯರ ಉಪಸ್ಥಿತಿಯಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು.
ದೇಗುಲದ ಪ್ರಧಾನ ಅರ್ಚಕ ವೇ. ಮೂ. ನಾರಾಯಣ ತಂತ್ರಿ, ರವಿ ಕುಮಾರ್ ಮಂದಾರ, ಶಶಿಧರ್ ಸುವರ್ಣ ಉಳಿಯಾರಗೋಳಿ, ಸದಾನಂದ ಎ. ಸುವರ್ಣ ಪೊಲಿಪು, ಅಶ್ವಿನಿ ಬಂಗೇರ ಕಾಪು, ಶಾಂತಲತಾ ಎಸ್. ಶೆಟ್ಟಿ ಮಲ್ಲಾರು, ನಾಗರಾಜ್ ಎಸ್. ಮೂಳೂರು, ಶ್ರೀಕಾಂತ್ ಕಾಪು ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.