ಬಂಟರ ಯಾನೆ ನಾಡವರ ಸಂಘ ಬೈಂದೂರು 30 ರ ಸಂಭ್ರಮ ಕಾರ್ಯಕ್ರಮ ಹೆಮ್ಮಾಡಿ ಜಯಶ್ರೀ ಸಭಾಭವನದಲ್ಲಿ ಭಾನುವಾರ ನಡೆಯಿತು. ಬೈಂದೂರು ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷ ಶಶಿಧರ ಶೆಟ್ಟಿ ಸಾಲ್ಗದ್ದೆ ಅಧ್ಯಕ್ಷತೆ ವಹಿಸಿದ್ದರು.
ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಧರ್ಮದರ್ಶಿ ಅಪ್ಪಣ್ಣ ಹೆಗ್ಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಅಶಕ್ತರಿಗೆ ನೆರವು ನೀಡುವುದರ ಮುಖೇನ ಸಮಾಜದಲ್ಲಿನ ಹಿಂದುಳಿದ ವರ್ಗವನ್ನು ಮೇಲೆತ್ತುವ ಕೆಲಸ ಮಾಡಬೇಕು ಎಂದರು.
ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಸಿಎ ಅಶೋಕ ಕುಮಾರ್ ಶೆಟ್ಟಿ, ನಿವೃತ್ತ ಪ್ರಿನ್ಸಿಪಾಲ್ ರಾಧಾಕೃಷ್ಣ ಶೆಟ್ಟಿ, ಬೆಂಗಳೂರು ಬಂಟರ ಸಂಘದ ವಿದ್ಯಾರ್ಥಿ ವೇತನ ಹಾಗೂ ಪ್ರಶಸ್ತಿ ಸಮಿತಿಯ ಛೇರ್ಮನ್ ಉಮೇಶ್ ಕುಮಾರ್ ಶೆಟ್ಟಿ, ಬೆಂಗಳೂರು ಬಂಟರ ಸಂಘದ ಗೌರವ ಕಾರ್ಯದರ್ಶಿ ವಿಜಯ ಶೆಟ್ಟಿ ಹಾಲಾಡಿ, ಉದ್ಯಮಿ ಜಗದೀಶ ಶೆಟ್ಟಿ ಕುದ್ರುಕೋಡು, ಉದ್ಯಮಿ ಜಯಶೀಲ ಶೆಟ್ಟಿ ಘಟಪ್ರಭ, ಮಂಜುನಾಥ ಶೆಟ್ಟಿ ಗಂಟೆಹೊಳೆ, ಸುಭಾಶ್ಚಂದ್ರ ಶೆಟ್ಟಿ ಸಾಲ್ಗದ್ದೆ, ಕೋಶಾಧಿಕಾರಿ ಜಯರಾಮ ಶೆಟ್ಟಿ, ಕಾರ್ಯದರ್ಶಿ ನಿತಿನ್ ಶೆಟ್ಟಿ, ಗೌರವಾಧ್ಯಕ್ಷ ವಾದಿರಾಜ ಶೆಟ್ಟಿ, ಚಿತ್ತೂರು ಮಂಜಯ್ಯ ಶೆಟ್ಟಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ ವಿತರಿಸಲಾಯಿತು. ಭಜನಾ ಸ್ಪರ್ಧೆಯಲ್ಲಿ ಸ್ಪರ್ಧಿಸಿದ ವಿಜೇತ ತಂಡಗಳಿಗೆ ಬಹುಮಾನ ವಿತರಿಸಲಾಯಿತು. ಸಾಧಕರನ್ನು ಗೌರವಿಸಲಾಯಿತು. ಸಂಘದ ಅಧ್ಯಕ್ಷ ಶಶಿಧರ ಶೆಟ್ಟಿ ಸಾಲ್ಗದ್ದೆ ಸ್ವಾಗತಿಸಿದರು. ಚಂದ್ರಶೇಖರ ಶೆಟ್ಟಿ ನಿರೂಪಿಸಿ, ಜಯರಾಮ ಶೆಟ್ಟಿ ವಂದಿಸಿದರು.