ಕುಂದಾಪುರ ತಾಲೂಕು ಯುವ ಬಂಟರ ಸಂಘ (ರಿ) ಕುಂದಾಪುರ ಸಾರಥ್ಯದಲ್ಲಿ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ, ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್, ಡಾ.ಬಿ.ಬಿ.ಹೆಗ್ಡೆ ಕಾಲೇಜು ಕುಂದಾಪುರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೋಟೇಶ್ವರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ, ಉದ್ಘಾಟನಾ ಮಾತುಗಳನ್ನಾಡಿದ ವಿನಯ ಆಸ್ಪತ್ರೆ ಕುಂದಾಪುರದ ಆಡಳಿತ ನಿರ್ದೇಶಕರಾದ ಡಾ. ರಂಜಿತ್ ಕುಮಾರ್ ಶೆಟ್ಟಿಯವರು ದಾನ ದಾನಗಳಲ್ಲಿ ಶ್ರೇಷ್ಠ ದಾನ ರಕ್ತದಾನ. ಇಂತಹ ಶ್ರೇಷ್ಠ ರಕ್ತದಾನ ಶಿಬಿರವನ್ನು ಕುಂದಾಪುರ ತಾಲೂಕು ಯುವ ಬಂಟರ ಸಂಘ ನಿರಂತರವಾಗಿ ಸಂಘಟಿಸುತ್ತಿರುವುದು ಶ್ಲಾಘನೀಯ ಎಂದರು.
ಸಂಘದ ಅಧ್ಯಕ್ಷರಾದ ನಿತೀಶ್ ಶೆಟ್ಟಿ ಬಸ್ರೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬಂಟರ ಯಾನೆ ನಾಡವರ ಮಾತೃ ಸಂಘ ಕುಂದಾಪುರ ತಾಲೂಕು ಸಮಿತಿಯ ಸಂಚಾಲಕರಾದ ಸಂಪತ್ ಕುಮಾರ್ ಶೆಟ್ಟಿ ಕಾವ್ರಾಡಿ, ಕುಂದಾಪುರದ ಹಿರಿಯ ವಕೀಲರಾದ ಟಿ.ಬಿ.ಶೆಟ್ಟಿ, ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರದ ಸಭಾಪತಿಗಳಾದ ಎಸ್ ಜಯಕರ ಶೆಟ್ಟಿ, ಉದ್ಯಮಿಗಳಾದ ಶಾನಾಡಿ ಸಂಪತ್ ಕುಮಾರ್ ಶೆಟ್ಟಿ, ರೋಟರಿ ಮಾಜಿ ಅಸಿಸ್ಟೆಂಟ್ ಗವರ್ನರ್ ರವಿರಾಜ್ ಶೆಟ್ಟಿ, ಕುಂದಾಪುರ ತಾಲೂಕು ಯುವ ಬಂಟರ ಸಂಘದ ಸ್ಥಾಪಕಾಧ್ಯಕ್ಷರು ಮತ್ತು ದಶಮ ಸಂಭ್ರಮದ ಅಧ್ಯಕ್ಷರಾದ ಡಾ| ಅಂಪಾರು ನಿತ್ಯಾನಂದ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಮುರಳೀಧರ ಶೆಟ್ಟಿ ಹುಯ್ಯಾರು, ಕೋಶಾಧಿಕಾರಿ ಜೆ.ಭರತ್ ರಾಜ್ ಶೆಟ್ಟಿ, ರಕ್ತದಾನ ಶಿಬಿರದ ಸಂಚಾಲಕರಾದ ರೋಶನ್ ಶೆಟ್ಟಿ ಕಾಕ್ತೋಟ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಡಾ. ಬಿ.ಬಿ.ಹೆಗ್ಡೆ ಕಾಲೇಜು ಕುಂದಾಪುರದ ಪ್ರಾಂಶುಪಾಲರಾದ ಪ್ರೊ. ಕೊತ್ತಾಡಿ ಉಮೇಶ್ ಶೆಟ್ಟಿ ಮತ್ತು ಕಾಳಾವರ ವರದರಾಜ ಎಂ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟೇಶ್ವರದ ಪ್ರಾಂಶುಪಾಲರಾದ ಡಾ. ರಾಜೇಂದ್ರ ಎಸ್ ನಾಯಕ್ ಅವರನ್ನು ಸನ್ಮಾನಿಸಲಾಯಿತು. ಹಾಗೆಯೇ ಆರೋಗ್ಯ ಭಾಗ್ಯ ಯೋಜನೆ ಅಡಿಯಲ್ಲಿ ಸಹಾಯ ಧನವನ್ನು ಶ್ರೀಮತಿ ಅಮಿತಾ ಕೈಲ್ಕೇರಿ ಮತ್ತು ಭಾಸ್ಕರ ಮುಳ್ಳುಗುಡ್ಡೆ ಅವರಿಗೆ ವಿತರಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ಸುಹಾಸ ಮಲ್ಯ ಪ್ರಾರ್ಥನೆಗೈದರು. ಸಂಘದ ಗೌರವಾಧ್ಯಕ್ಷರಾದ ವತ್ಸಲಾ ದಯಾನಂದ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಡಾ. ಬಿ.ಬಿ.ಹೆಗ್ಡೆ ಕಾಲೇಜು ಕುಂದಾಪುರದ ಉಪ ಪ್ರಾಂಶುಪಾಲರಾದ ಡಾ| ಚೇತನ ಕುಮಾರ್ ಶೆಟ್ಟಿ ಕೊವಾಡಿ ಸ್ವಾಗತಿಸಿ, ಸನ್ಮಾನಿತರನ್ನು ಸಭೆಗೆ ಪರಿಚಯಿಸಿದರು. ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ಅಧ್ಯಕ್ಷರಾದ ಉದಯ ಕುಮಾರ್ ಶೆಟ್ಟಿ ಮಚ್ಚಟ್ಟು ವಂದಿಸಿದರು. ದಶಮ ಸಂಭ್ರಮದ ಕೋಶಾಧಿಕಾರಿ ಅಕ್ಷಯ ಹೆಗ್ಡೆ ಮೊಳಹಳ್ಳಿ ಕಾರ್ಯಕ್ರಮ ನಿರೂಪಿಸಿದರು.