ಹೆಮ್ಮಾಡಿಯ ಜಯಶ್ರೀ ಭವನದಲ್ಲಿ ಬಂಟರ ಯಾನೆ ನಾಡವರ ಸಂಘ ಬೈಂದೂರು ಇದರ 30ರ ಸಂಭ್ರಮ ಕಾರ್ಯಕ್ರಮದಡಿಯಲ್ಲಿ ಅಕ್ಟೋಬರ್ 27 ರಂದು ನಿವೃತ್ತ ಶಿಕ್ಷಕ ಬೇಲ್ತೂರು ನಾಗಯ್ಯ ಶೆಟ್ಟಿ ಸಾಲ್ಗದ್ದೆ ಇವರ ಸ್ಮರಣಾರ್ಥ ನೀಡುವ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ಬೈಂದೂರು ವಲಯದ ಬಾರಂದಾಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಅಮಿತಾ ಬಿ ಶೆಟ್ಟಿ ಅವರಿಗೆ ನೀಡಿ ಗೌರವಿಸಲಾಯಿತು.
ಈ ಕಾರ್ಯಕ್ರಮವನ್ನು ಬಸ್ರೂರು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಬಿ. ಅಪ್ಪಣ್ಣ ಹೆಗ್ಡೆ ಉದ್ಘಾಟಿಸಿದರು. ಬೆಂಗಳೂರು ಬಂಟರ ಸಂಘದ ಅಧ್ಯಕ್ಷರಾದ ಸಿಎ ಅಶೋಕ ಕುಮಾರ್ ಶೆಟ್ಟಿ, ವಿದ್ಯಾರ್ಥಿ ವೇತನ ಸಮಿತಿಯ ಛೇರ್ಮನ್ ಉಮೇಶ್ ಕುಮಾರ್ ಶೆಟ್ಟಿ, ನಿವೃತ್ತ ಪ್ರಾಂಶುಪಾಲ ರಾಧಾಕೃಷ್ಣ ಶೆಟ್ಟಿ ಬಸ್ರೂರು, ಉದ್ಯಮಿ ಜಯಶೀಲ ಶೆಟ್ಟಿ, ಮಂಜುನಾಥ ಶೆಟ್ಟಿ ಗಂಟಿಹೊಳೆ, ಸುಭಾಶ್ಚಂದ್ರ ಶೆಟ್ಟಿ ಸಾಲ್ಗದ್ದೆ, ಚಿತ್ತೂರು ಮಂಜಯ್ಯ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.
ಸಂಚಾಲಕ ಜಗದೀಶ ಶೆಟ್ಟಿ ಕುದ್ರುಗೋಡು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಂಘದ ಅಧ್ಯಕ್ಷ ಶಶಿಧರ ಶೆಟ್ಟಿ ಸಾಲ್ಗದ್ದೆ ಸ್ವಾಗತಿಸಿದರು. ಜತೆ ಕಾರ್ಯದರ್ಶಿ ಜಯರಾಮ ಶೆಟ್ಟಿ ವಂದಿಸಿದರು. ಕೋಟೇಶ್ವರ ಕೆ.ಪಿ.ಎಸ್. ಪಬ್ಲಿಕ್ ಶಾಲೆಯ ಉಪ ಪ್ರಾಂಶುಪಾಲರಾದ ಚಂದ್ರಶೇಖರ ಶೆಟ್ಟಿ, ಶಿಕ್ಷಕರಾದ ಸುನಿಲ್ ಶೆಟ್ಟಿ ಹರ್ಕೂರು, ಉದಯ ಕುಮಾರ್ ಶೆಟ್ಟಿ ಆಲೂರು ಹಾಗೂ ಸುಕುಮಾರ ಶೆಟ್ಟಿ ದೇವಲ್ಕುಂದ ಕಾರ್ಯಕ್ರಮ ನಿರೂಪಿಸಿದರು.