ಸಹಕಾರಿ ಕ್ಷೇತ್ರದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಲಾಭದಲ್ಲಿ ಒಂದಂಶವನ್ನು ಶಿಕ್ಷಣ, ಆರೋಗ್ಯ ಸೇರಿದಂತೆ ಇನ್ನಿತರ ಸಮಾಜಮುಖಿ ಕೆಲಸಗಳನ್ನು ಮಾಡಿ, ಜನರೊಡನೆ ನೇರ ಸಂಪರ್ಕ ಇಟ್ಟುಕೊಂಡಲ್ಲಿ ಸಹಕಾರಿ ಕ್ಷೇತ್ರ ಬೆಳೆಯಲು ಸಾಧ್ಯ ಎಂದು ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಉಡುಪಿ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಹೇಳಿದರು.
ಮಂದಾರ್ತಿ ವ್ಯವಸಾಯ ಸೇವಾ ಸಹಕಾರಿ ಸಂಘದ ಶ್ರೀ ಚಾಮುಂಡೇಶ್ವರಿ ಸಭಾಂಗಣದ ಶ್ರೀ ದುರ್ಗಾ ಸಹಕಾರ ಸೌಧದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಬೆಂಗಳೂರು ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ., ಉಡುಪಿ ಮಂದಾರ್ತಿ ಸೇವಾ ಸಹಕಾರಿ ಸಂಘ ನಿ., ಮಂದಾರ್ತಿ ಹಾಗೂ ಸಹಕಾರ ಇಲಾಖೆ ಉಡುಪಿ ಆಶ್ರಯದಲ್ಲಿ ನಡೆದ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರೊ. ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಸಹಕಾರ ಕ್ಷೇತ್ರದ ಬಗ್ಗೆ ದಿಕ್ಸೂಚಿ ಭಾಷಣ ಮಾಡಿದರು. ವಿಶ್ವವಿದ್ಯಾಲಯಗಳಲ್ಲಿ ಸಹಕಾರಿ ಅಧ್ಯಯನ ವಿಷಯ ಕಡ್ಡಾಯ ಮಾಡಬೇಕು ಎಂದರು. ಜಯಕರ ಶೆಟ್ಟಿ ಇಂದ್ರಾಳಿ ಸಹಕಾರಿ ಧ್ವಜಾರೋಹಣ ಮಾಡಿದರು. ಸಹಕಾರ ಸಂಘಗಳ ನಿವೃತ್ತ ಸಹಾಯಕ ನಿಬಂಧಕ ಅರುಣ್ ಕುಮಾರ್ ಎಸ್. ವಿ, ಸುರೇಶ್ ಶೇರ್ವೇಗಾರ, ಜಲಂಧರ ಶೆಟ್ಟಿ, ಜಯಶೀಲಾ ಶೆಟ್ಟಿ, ಆನಂದ ಮರಕಾಲ ಮತ್ತು ಪರಿಸರದ 10 ಹಾಲು ಉತ್ಪಾದಕ ಸಂಘಗಳ ಅಧ್ಯಕ್ಷರು, ಕಾರ್ಯದರ್ಶಿಗಳನ್ನು ಗೌರವಿಸಿ ಅಭಿನಂದಿಸಲಾಯಿತು. 2025 ರ ಸಾಲಿನ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು.
ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಳದ ಅನುವಂಶಿಕ ಮೊಕ್ತೇಸರ ಎಚ್. ಧನಂಜಯ ಶೆಟ್ಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಂದಾರ್ತಿ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಚ್. ಗಂಗಾಧರ ಶೆಟ್ಟಿ, ಉಡುಪಿ ಸಹಕಾರ ಸಂಘಗಳ ಉಪ ನಿಬಂಧಕಿ ಕೆ. ಆರ್. ಲಾವಣ್ಯ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ., ನಿರ್ದೇಶಕರಾದ ಕಟಪಾಡಿ ಶಂಕರ ಪೂಜಾರಿ, ಕೊರಗ ಪೂಜಾರಿ, ಶ್ರೀಧರ ಪಿ. ಎಸ್., ಸುರೇಶ್ ರಾವ್, ಮನೋಜ್ ಕರ್ಕೇರಾ, ಮಂದಾರ್ತಿ ಸೇವಾ ಸಹಕಾರಿ ಸಂಘ ಉಪಾಧ್ಯಕ್ಷ ಕೆ. ಶಂಭುಶಂಕರ ರಾವ್, ಕಾರ್ಯನಿರ್ವಹಣಾಧಿಕಾರಿ ರಾಮಕೃಷ್ಣ ಶೆಟ್ಟಿ ನಿರ್ದೇಶಕರಾದ ಶೇಡಿಕೊಡ್ಲು ವಿಠಲ ಶೆಟ್ಟಿ, ನಿತ್ಯಾನಂದ ಶೆಟ್ಟಿ, ಚಂದ್ರಶೇಖರ ಶೆಟ್ಟಿ, ಅರುಣ್ ಕುಮಾರ್ ಶೆಟ್ಟಿ, ಗುರುಪ್ರಸಾದ್, ಸಂತೋಷ್ ಶೆಟ್ಟಿ, ಬಸವ ಮರಾಠಿ, ಪ್ರವೀಣ್ ಕುಮಾರ್ ಶೆಟ್ಟಿ, ಬೇಬಿ ಪೂಜಾರಿ, ಪ್ರೇಮ, ರಾಧಾ, ರಾಜಾರಾಮ ಶೆಟ್ಟಿ ಉಪಸ್ಥಿತರಿದ್ದರು.
ರಾಜೇಶ್ ಬಾರ್ಕೂರು ಪ್ರಾರ್ಥಿಸಿ, ಅನುಷಾ ಕೋಟ್ಯಾನ್ ಸ್ವಾಗತಿಸಿ, ಶ್ರೀಧರ ಪಿ. ಎಸ್ ಸಹಕರಿಸಿದರು. ಸುದರ್ಶನ ಶೆಟ್ಟಿ ನಿರೂಪಿಸಿ, ರಾಮಕೃಷ್ಣ ಶೆಟ್ಟಿ ವಂದಿಸಿದರು.