ಕಾರ್ತಿಕ್ ಶೆಟ್ಟಿ ಮಜಿಬೈಲುರವರ ಸಾಮಾಜಿಕ ಸೇವೆಯನ್ನು ಗುರುತಿಸಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಡಿಸೆಂಬರ್ 7 ರಂದು ಮುಂಬಯಿಯ ಕುರ್ಲಾದ ಬಂಟರ ಭವನದಲ್ಲಿ ನಡೆದ ಐಕಳ ಹರೀಶ್ ಶೆಟ್ಟಿಯವರ ನೇತೃತ್ವದ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಹಾಗೂ ಪ್ರವೀಣ್ ಭೋಜ ಶೆಟ್ಟಿಯವರ ನೇತೃತ್ವದ ಮುಂಬಯಿ ಬಂಟರ ಸಂಘದ ಸಹಯೋಗದೊಂದಿಗೆ ಜರಗಿದ ‘ವಿಶ್ವ ಬಂಟರ ಸಮಾಗಮ-2024’ ಕಾರ್ಯಕ್ರಮದಲ್ಲಿ ಅದ್ದೂರಿಯಾಗಿ ಗೌರವಿಸಲಾಯಿತು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಮಹಾದಾನಿ ಕೂಳೂರು ಕನ್ಯಾನ ಸದಾಶಿವ ಶೆಟ್ಟಿ, ಮುಂಬಯಿ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಬೋಜ ಶೆಟ್ಟಿ, ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಕೋಶಾಧಿಕಾರಿ ಉಳ್ತೂರು ಮೋಹನ್ ದಾಸ್ ಶೆಟ್ಟಿ, ಜತೆ ಕಾರ್ಯದರ್ಶಿ ಚಂದ್ರಹಾಸ ಶೆಟ್ಟಿ, ಮಹಾ ಪೋಷಕರು, ನಿರ್ದೇಶಕರು ಉಪಸ್ಥಿತರಿದ್ದರು. ಕರ್ನೂರು ಮೋಹನ್ ರೈ ಮತ್ತು ಅಶೋಕ್ ಪಕ್ಕಳ ಕಾರ್ಯಕ್ರಮ ನಿರ್ವಹಿಸಿದರು.