ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಶಿಕ್ಷಕ – ಪಾಲಕರ ಸಭೆಯು ದಿನಾಂಕ 21 12.2024 ಶನಿವಾರದಂದು ಜರುಗಿತು. ಸಭೆಯನ್ನು ಉದ್ದೇಶಿಸಿ ಸಹ ಸಂಸ್ಥಾಪಕರು ಹಾಗೂ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ರವರು ವೈಯಕ್ತಿಕ ವಿಷಯಗಳಲ್ಲಿ ವಿದ್ಯಾರ್ಥಿಗಳ ಸಾಧನೆ, ತರಗತಿಗಳಲ್ಲಿ ಶಿಸ್ತು ಮತ್ತು ಅವರ ಹಾಜರಾತಿ ಶೇಖಡಾವಾರು ಬಗ್ಗೆ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ, ಸಕಾರಾತ್ಮಕ ಚಿಂತನೆ, ಪ್ರೇರಣೆ, ನಿರ್ದಿಷ್ಟ ಗುರಿ ಇತ್ಯಾದಿ ವಾಸ್ತವಾಂಶಗಳನ್ನು ಮನದಟ್ಟು ಮಾಡುವುದು ಅಗತ್ಯ ಎಂದರು.
ಸಂಸ್ಥಾಪಕರಲ್ಲಿ ಓರ್ವರಾದ ಡಾ. ಬಿ ಗಣನಾಥ ಶೆಟ್ಟಿ ಯವರು ನಿತ್ಯ ಜೀವನದಲ್ಲಿ ಸಮಸ್ಯೆಗಳನ್ನು ಎದುರಿಸುವ ಕೌಶಲ ಸಹಿತ ಶಿಕ್ಷಣವೇ ನಮ್ಮ ಗುರಿ ಎಂದರು. ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಪದವಿಪೂರ್ವ ಶಿಕ್ಷಣದ ಜೊತೆಗೆ ಸಿ. ಎ, ಸಿ. ಎಸ್, ಕಂಪ್ಯೂಟರ್ ಸಂಬಂಧಿತ ವಿವಿಧ ಕಲಿಕೆಗಳ ಜೊತೆಗೆ ಎನ್ ಎಸ್ ಎಸ್, ಕೆಸಡೊರ್ಂಜಿ ದಿನ, ಕೈಗಾರಿಕಾ ಪ್ರದೇಶಗಳ ಭೇಟಿಯ ಜೊತೆಗೆ ಹಲವಾರು ಕಾರ್ಯಕ್ರಮಗಳ ಆಯೋಜನೆಯ ಮೂಲಕ ನೈತಿಕ ಮತ್ತು ವ್ಯಾವಹಾರಿಕ ಜ್ಞಾನವನ್ನು ನೀಡುತ್ತಿರುವ ಸಮಗ್ರ ಮಾಹಿತಿಗಳನ್ನು ಒದಗಿಸಿದರು. ಪಠ್ಯದ ಜೊತೆಗೆ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾದ ಪಠ್ಯೇತರ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ಸಭೆಯಲ್ಲಿ ಪೋಷಕ ವರ್ಗದವರು, ಬೋಧಕ – ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಅರ್ಥಶಾಸ್ತ್ರ ಉಪನ್ಯಾಸಕ ಉಮೇಶ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.