ತುಳುನಾಡಿನ ಶಕ್ತಿಯಾದ ಸಾಂಪ್ರದಾಯಿಕ ಕಂಬಳ ಕ್ರೀಡೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಹೇಳಿದರು. ಪಡುಪಣಂಬೂರು ಅರಮನೆ ಗದ್ದೆಯಲ್ಲಿ ನಡೆದ ಮೂಲ್ಕಿ ಸೀಮೆ ಅರಸು ಕಂಬಳದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕಂಬಳ ಸಮಿತಿ ವತಿಯಿಂದ ಸನ್ಮಾನ ಸ್ವೀಕರಿಸಿ, ಅವರು ಮಾತನಾಡಿದರು.
ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಐಕಳಬಾವ ಡಾ| ದೇವಿ ಪ್ರಸಾದ್ ಶೆಟ್ಟಿ ಮಾತನಾಡಿ, ಈ ಬಾರಿ ಸರಕಾರವು 24 ಕಂಬಳಗಳಿಗೆ ಐದು ಲಕ್ಷ ರೂಪಾಯಿ ಹಣ ಅನುದಾನ ಮಂಜೂರು ಮಾಡಿದೆ. ತುಳುನಾಡಿನ ಹೆಮ್ಮೆಯ ಕಂಬಳಗಳಿಗೆ ಭಾರತ ಸರಕಾರದ ಮಾನ್ಯತೆ ಪಡೆಯಲು ಸ್ಥಳೀಯ ಸಂಸದರ ಮೂಲಕ ಪ್ರಯತ್ನ ನಡೆಸಲಾಗುವುದು ಎಂದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ಎಂ. ರೈ ಮಾತನಾಡಿ, ವಿಶ್ವ ವ್ಯಾಪಿ ಕಂಬಳ ಕ್ರೀಡೆ ಸೂರ್ಯ ಚಂದ್ರರಿರುವ ತನಕ ಮುಂದುವರಿಯುವುದು ಶತಹ ಸಿದ್ಧ ಎಂದರು.
ಮಾಜಿ ಸಚಿವರಾದ ಬಿ. ರಮಾನಾಥ ರೈ ಮತ್ತು ಕೆ. ಅಭಯ್ ಚಂದ್ರ ಜೈನ್, ಭಾರತ್ ಬ್ಯಾಂಕ್ ಅಧ್ಯಕ್ಷ ಸೂರ್ಯಕಾಂತ ಜಯ ಸುವರ್ಣ, ಮುಂಬಯಿ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ, ಕಂಬಳ ಅಕಾಡೆಮಿ ಸಂಚಾಲಕ ಗುಣಪಾಲ ಕಡಂಬ, ಜಾಗತಿಕ ಬಂಟರ ಸಂಘದ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಡಾ. ಅಮರಶ್ರೀ ಅಮರನಾಥ ಶೆಟ್ಟಿ, ನಿಡ್ಡೋಡಿ ಚಾವಡಿಮನೆ ಜಗನ್ನಾಥ ಶೆಟ್ಟಿ, ಶರತ್ ಸಾಲ್ಯಾನ್, ಜಗದೀಶ್ ಅಧಿಕಾರಿ, ಸುಚರಿತ ಶೆಟ್ಟಿ, ಗುರುರಾಜ್ ಎಸ್. ಪೂಜಾರಿ ಲೋಕೇಶ್ ಶೆಟ್ಟಿ ಮುಚ್ಚೂರು, ಯೋಗೇಶ್ ಶೆಟ್ಟಿ ಜೆಪ್ಪು, ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ರವಿ ಶೆಟ್ಟಿ ಕತಾರ್, ರತ್ನಾಕರ ಜೈನ್, ಐಕಳ ಕಂಬಳ ಸಮಿತಿಯ ಚಿತ್ತರಂಜನ್ ಭಂಡಾರಿ, ಸುಗಂಧಿ ದಿನೇಶ್ ಕೊಂಡಾಣ, ಸುನಿಲ್ ಆಳ್ವ, ಉದ್ಯಮಿ ಆಸ್ಟಿನ್ ಸಂತೋಷ್, ಪದ್ಮರಾಜ್ ಪೂಜಾರಿ ಮಂಗಳೂರು, ಶಾಮ್ ಪ್ರಸಾದ್, ಕಿಶೋರ್ ಶೆಟ್ಟಿ ದೆಪ್ಪುಣಿಗುತ್ತು, ಪ್ರೇಮಲತಾ ಯೋಗಿಶ್ ಕೋಟ್ಯಾನ್, ಜೀವನ್ ಕೆ ಶೆಟ್ಟಿ ಉಪಸ್ಥಿತರಿದ್ದರು.
ಮೂಲ್ಕಿ ಸೀಮೆ ಅರಸು ಕಂಬಳ ಸಮಿತಿ ಅಧ್ಯಕ್ಷ ಕಿರಣ್ ಶೆಟ್ಟಿ ಕೊಲ್ನಾಡುಗುತ್ತು ಸ್ವಾಗತಿಸಿದರು. ಸಮಿತಿಯ ನವೀನ್ ಶೆಟ್ಟಿ ಎಡ್ಮೆಮಾರ್ ನಿರೂಪಿಸಿದರು.