ಕ್ರೀಡಾಕೂಟದಿಂದ ಸೌಹಾರ್ದತೆ, ವಿಶ್ವಾಸ, ಸಮಾನತೆ ಮೂಡುತ್ತದೆ. ಬಂಟ ಸಮಾಜಕ್ಕೆ ಸಮಾಜದ ನೇತೃತ್ವ ವಹಿಸುವ ವಿಶೇಷ ಶಕ್ತಿಯಿದೆ. ಇಂತಹ ಅವಕಾಶಗಳ ಮೂಲಕ ಮತ್ತಷ್ಟು ಕಾರ್ಯಗಳಾಗಲಿ ಎಂದು ಕರ್ನಾಟಕ ವಿಧಾನಸಭಾ ಸಭಾ ಅಧ್ಯಕ್ಷ ಯು.ಟಿ. ಖಾದರ್ ಹೇಳಿದರು. ಪಡುಬಿದ್ರಿ ಬಂಟರ ಸಂಘದ ವತಿಯಿಂದ ಪಡುಬಿದ್ರಿ ಬಂಟರ ಭವನದ ಸಮೀಪ ರಾಷ್ಟ್ರೀಯ ಹೆದ್ದಾರಿಯ 66ರ ಬದಿಯಲ್ಲಿರುವ ದಿ. ರಮೇಶ್ ಮಹಾಬಲ ಶೆಟ್ಟಿ ಕ್ರೀಡಾಂಗಣದಲ್ಲಿ ಜರಗಿದ ಅಂತರ್ ರಾಜ್ಯ ಬಂಟ ಕ್ರೀಡೋತ್ಸವ ಎಂ ಆರ್ ಜಿ ಟ್ರೋಫಿ -2024 ಇದರ ಪಥಸಂಚನಲದ ಗೌರವ ರಕ್ಷೆ ಸ್ವೀಕರಿಸಿ ಮಾತನಾಡಿದರು. ಕಾರ್ಯಕ್ರಮವನ್ನು ಎಂ ಆರ್ ಜಿ ಗ್ರೂಪ್ ಬೆಂಗಳೂರು ಇದರ ಸಿ.ಎಂ.ಡಿ. ಡಾ| ಕೆ ಪ್ರಕಾಶ್ ಶೆಟ್ಟಿ ಉದ್ಘಾಟಿಸಿದರು.
ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಬಂಟರಿಗೆ ಗುರುಗಳ ಅವಶ್ಯಕತೆಯಿಲ್ಲ. ಅವರು ಏಕಲವ್ಯರಂತೆ ಗುರು ಇಲ್ಲದೆಯೂ ವಿದ್ಯೆ ಕಲಿಯುವ ತಾಕತ್ತು ಬಂಟ ಸಮಾಜಕ್ಕಿದೆ. ಭೂ ಸುಧಾರಣೆ ಕಾನೂನಿನ ಮೂಲಕ ಭೂಮಿ ಕಳೆದುಕೊಂಡರೂ ಪರ ಊರಿಗೆ ತೆರಳಿ ಆರ್ಥಿಕ ಸದೃಢತೆಯನ್ನು ಸಾಧಿಸಿದ ಸಮಾಜವಾಗಿದೆ ಎಂದರು.
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇದರ ಅಧ್ಯಕ್ಷರಾದ ಸಹಕಾರ ರತ್ನ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಇವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಡಾ. ಎಂ. ಎನ್. ರಾಜೇಂದ್ರ ಕುಮಾರ್, ಅದಾನಿ ಸಂಸ್ಥೆಯ ದಕ್ಷಿಣ ಪ್ರಾಂತೀಯ ಅಧ್ಯಕ್ಷ ಕಿಶೋರ್ ಆಳ್ವ, ಕೆಎಂಎಫ್ ಮಂಗಳೂರು ಅಧ್ಯಕ್ಷ ಸುಚರಿತ ಶೆಟ್ಟಿ, ಮುನಿಯಾಲು ಉದಯ ಶೆಟ್ಟಿ, ಉಮಾ ಕೃಷ್ಣ ಶೆಟ್ಟಿ ಮಾತನಾಡಿದರು.
ಪಡುಬಿದ್ರಿ ಬಂಟರ ಸಂಘದ ಅಧ್ಯಕ್ಷರಾದ ಡಾ| ಐಕಳ ಬಾವ ದೇವಿ ಪ್ರಸಾದ್ ಶೆಟ್ಟಿ ಬೆಳಪು ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ, ಬೈಂದೂರು ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ, ಪಡುಬಿದ್ರಿ ಪಂಚಾಯತ್ ಅಧ್ಯಕ್ಷೆ ಶಶಿಕಲಾ ಪೂಜಾರಿ, ಜಾಗತಿಕ ಬಂಟರ ಸಂಘದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಮುಂಬಯಿ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ, ಪುಚ್ಚೊಟ್ಟು ಬೀಡು ಕೃಷ್ಣ ಶೆಟ್ಟಿ, ಕರ್ನಿರೆ ವಿಶ್ವನಾಥ ಶೆಟ್ಟಿ, ಸಂತೋಷ್ ಶೆಟ್ಟಿ ಇನ್ನಾ ಕುರ್ಕಿಲ್ ಬೆಟ್ಟು ಬಾಳಿಕೆ, ರಾಕೇಶ್ ಮಲ್ಲಿ, ಸೀತಾರಾಮ್ ಶೆಟ್ಟಿ, ಪುಚ್ಚೊಟ್ಟು ಬೀಡು, ಕ್ರೀಡಾಕೂಟದ ಸ್ಥಳದಾನಿ ಕರುಣಾಕರ ಪೂಜಾರಿ, ಸಿರಿಮುಡಿ ದತ್ತಿ ನಿಧಿಯ ಅಧ್ಯಕ್ಷ ಸಾಂತೂರು ಭಾಸ್ಕರ ಶೆಟ್ಟಿ, ಬಂಟ್ಸ್ ವೆಲ್ಫೇರ್ ಟ್ರಸ್ಟ್ ಅಧ್ಯಕ್ಷ ಎರ್ಮಾಳು ಶಶಿಧರ ಶೆಟ್ಟಿ, ಕೋಶಾಧಿಕಾರಿ ರವಿ ಶೆಟ್ಟಿ ಗುಂಡ್ಲಾಡಿ, ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ ಪಡುಹಿತ್ಲು, ಮಹಿಳಾ ಘಟಕ ಅಧ್ಯಕ್ಷೆ ಜ್ಯೋತಿ ಎಸ್. ಶೆಟ್ಟಿ, ಬಂಟರ ಯುವ ವಿಭಾಗದ ಅಧ್ಯಕ್ಷ ನವೀನ್ ಎನ್. ಶೆಟ್ಟಿ, ಕ್ರೀಡಾ ಸಂಚಾಲಕ ವಿನಯ ಶೆಟ್ಟಿ ಎರ್ಮಾಳು, ಮಹಿಳಾ ವಿಭಾಗದ ಸಂಚಾಲಕಿ ಶರ್ಮಿಳಾ ಆರ್ ಶೆಟ್ಟಿ, ಮಾಜಿ ಅಧ್ಯಕ್ಷ ನವೀನ್ ಚಂದ್ರ ಜೆ ಶೆಟ್ಟಿ, ಹರಿಪ್ರಸಾದ್ ರೈ, ಶಶಿಕಾಂತ್ ಪಡುಬಿದ್ರಿ, ಡಾ| ರೋಶನ್ ಕುಮಾರ್ ಶೆಟ್ಟಿ ಮತ್ತಿತರರಿದ್ದರು.
ಡಾ| ಐಕಳ ಬಾವ ದೇವಿ ಪ್ರಸಾದ್ ಶೆಟ್ಟಿ ಬೆಳಪು ಸ್ವಾಗತಿಸಿದರು. ಸತೀಶ್ ಶೆಟ್ಟಿ ಗುಡ್ಡೆಚ್ಚಿ ಮತ್ತು ಜಯ ಶೆಟ್ಟಿ ಪಡ್ರೆ ನಿರೂಪಿಸಿ, ಪ್ರಕಾಶ್ ಶೆಟ್ಟಿ ವಂದಿಸಿದರು. ಪುಣೆ ಉದ್ಯಮಿ ಸೀತಾರಾಮ ಶೆಟ್ಟಿ ಪುಚ್ಚೊಟ್ಟು ಬೀಡು ಪಡುಬಿದ್ರಿ ಮಹಾಲಿಂಗೇಶ್ವರ ಮಹಾ ಗಣಪತಿ ದೇವಸ್ಥಾನದಲ್ಲಿ ಕ್ರೀಡಾ ಜ್ಯೋತಿ ಮೆರವಣಿಗೆಗೆ ಚಾಲನೆ ನೀಡಿದರು. ಅತ್ಯಾಕರ್ಷಕ ವಾಹನ ಮೆರವಣಿಗೆಗಳೊಂದಿಗೆ ಕ್ರೀಡಾ ಜ್ಯೋತಿಯು ಪಡುಬಿದ್ರಿ ಪೇಟೆಯ ಮೂಲಕ ಕ್ರೀಡಾಂಗಣಕ್ಕೆ ಸಾಗಿ ಬಂದಿತು.
ಸಹಕಾರ ರತ್ನ ಡಾ| ಎಂ ಎನ್ ರಾಜೇಂದ್ರ ಕುಮಾರ್ ಕ್ರೀಡಾ ಜ್ಯೋತಿ ಪ್ರಜ್ವಲನೆ ನಡೆಸಿದರು. ಜಾಗತಿಕ ಬಂಟರ ಸಂಘದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಕ್ರೀಡಾಕೂಟದ ಧ್ವಜಾರೋಹಣಗೈದರು. ಕ್ರೀಡಾಕೂಟದಲ್ಲಿ ಪಥಸಂಚಲನ, ವಾಲಿಬಾಲ್, ತ್ರೋಬಾಲ್, ಕಬ್ಬಡಿ, ಹಗ್ಗ ಜಗ್ಗಾಟ ಪಂದ್ಯಗಳು ನಡೆಯಿತು.