ಬಂಟರ ಸಂಘ ಮುಂಬಯಿ ಅಂಧೇರಿ ಬಾಂದ್ರಾ ಪ್ರಾದೇಶಿಕ ಸಮಿತಿಯ ವತಿಯಿಂದ ಜನವರಿ 8 ರಿಂದ 10 ರವರೆಗೆ ಇತಿಹಾಸ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಮಹಾರಾಷ್ಟ್ರದ ಸೋಲಾಪುರದಲ್ಲಿರುವ ಪಂಢರಾಪುರ ಹಾಗೂ ಬಾಲಾಜಿ ದೇವಾಲಯ ಯಾತ್ರೆಯನ್ನು ಕೈಗೊಂಡಿತ್ತು. ಪಂಢರಾಪುರದ ವಿಠಲನನ್ನು ಭಕ್ತಿ ಶ್ರದ್ಧೆಯಿಂದ ಪೂಜಿಸುವ, ಅತೀ ಹೆಚ್ಚು ಭಕ್ತರು ಭೇಟಿ ನೀಡುವ ಪ್ರಮುಖ ದೇವಸ್ಥಾನವಾಗಿದೆ. ಪುಣೆಯ ಬಾಲಾಜಿ ದೇವಸ್ಥಾನಕ್ಕೆ ಅದರದ್ದೇ ಆದ ಖ್ಯಾತಿ ಇದೆ. ಈ ಎರಡೂ ಧಾರ್ಮಿಕ ಕ್ಷೇತ್ರದ ಯಾತ್ರೆಯಲ್ಲಿ ಸುಮಾರು 43 ಜನರು ಪಾಲ್ಗೊಂಡು ದರ್ಶನ ಪಡೆದರು.
ಅಂಧೇರಿ ಬಾಂದ್ರಾ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷರಾದ ಸೂರಜ್ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶೋಭಾ ಅಮರನಾಥ ಶೆಟ್ಟಿ ಇವರ ನೇತೃತ್ವದಲ್ಲಿ ಈ ಪ್ರವಾಸವನ್ನು ಏರ್ಪಡಿಸಲಾಗಿತ್ತು. ಮುಂಬಯಿ ಬಂಟರ ಸಂಘದ ಉಪಾಧ್ಯಕ್ಷ ಮಹೇಶ್ ಶೆಟ್ಟಿ, ಅಂಧೇರಿ ಬಾಂದ್ರಾದ ಕನ್ವೀನರ್ ರವೀಂದ್ರ ಶೆಟ್ಟಿ, ಉಪಾಧ್ಯಕ್ಷ ಯಶವಂತ ಶೆಟ್ಟಿ, ಜೊತೆ ಕಾರ್ಯದರ್ಶಿ ಅಮರನಾಥ ಶೆಟ್ಟಿ, ಸಮಾಜಸೇವಾ ಸಮಿತಿಯ ಲಕ್ಷ್ಮಣ್ ಶೆಟ್ಟಿ, ವಿವಾಹ ನೋಂದಣಿ ಸಮಿತಿಯ ಕಾರ್ಯಾಧ್ಯಕ್ಷರಾದ ಕೃಷ್ಣ ಶೆಟ್ಟಿ, ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆ ವಜ್ರಾ ಪೂಂಜಾ ಮತ್ತು ಮಹಿಳಾ ವಿಭಾಗದ ಹಾಗೂ ಸಂಸ್ಥೆಯ ಕಾರ್ಯಕಾರಿ ಸಮಿತಿಯ ಸದಸ್ಯರು ಪಾಲ್ಗೊಂಡಿದ್ದರು.