ಬ್ರಹ್ಮಾವರ ವ್ಯ.ಸೇ.ಸ. ಸಂಘದ ನೂತನ ಅಧ್ಯಕ್ಷರಾಗಿ ರಾಜೇಶ್ ಶೆಟ್ಟಿ ಬಿರ್ತಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಅಭೂತಪೂರ್ವ ದಿಗ್ವಿಜಯ ಸಾಧಿಸಿದ್ದ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಎಲ್ಲಾ ಸ್ಥಾನಗಳಲ್ಲೂ ಜಯ ಗಳಿಸಿದ್ದರು.
ಇದೀಗ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಬಿರ್ತಿ ರಾಜೇಶ್ ಶೆಟ್ಟಿ, ಉಪಾಧ್ಯಕ್ಷರಾಗಿ ಗಣೇಶ್ ಶೆಟ್ಟಿ ಹಂದಾಡಿ ಸರ್ವಾನುಮತದಿಂದ ಆಯ್ಕೆಯಾಗಿದ್ದು, ಪದಗ್ರಹಣ ಕಾರ್ಯಕ್ರಮವು ಜನವರಿ 16 ರಂದು ಸಂಜೆ 4ಗಂಟೆಗೆ ನಡೆಯಿತು.