ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ದ ವಾರ್ಷಿಕ ಪ್ರಶಸ್ತಿ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು, ತುಮಕೂರಿನಲ್ಲಿ ಜನವರಿ 18 ಮತ್ತು 19ರಂದು ನಡೆಯಲಿರುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ. ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ನೀಡಲಾಗುತ್ತಿದ್ದು, ವಾರಪತ್ರಿಕೆಯಲ್ಲಿ ಪ್ರಕಟವಾದ ಚಿತ್ರಲೇಖನಕ್ಕೆ ಕೊಡಮಾಡುವ ‘ಮಂಗಳ ಎಂ.ಸಿ ವರ್ಗಿಸ್ ಪ್ರಶಸ್ತಿ’ಗೆ ಸುದ್ದಿ ಬಿಡುಗಡೆ ಅಂಕಣಕಾರ ಹಾಗೂ ಮಧುಪ್ರಪಂಚ ಪತ್ರಿಕೆಯ ಸಂಪಾದಕರೂ ಆಗಿರುವ ನಾರಾಯಣ ರೈ ಕುಕ್ಕುವಳ್ಳಿ ಆಯ್ಕೆಯಾಗಿದ್ದಾರೆ.ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕರೂ ಆಗಿರುವ ನಾರಾಯಣ ರೈ ಕುಕ್ಕುವಳ್ಳಿ ಅವರು ಸಾಹಿತಿಯೂ ಆಗಿದ್ದಾರೆ. ಇವರ ಸೇವೆ ಸಾಧನೆಯನ್ನು ಗುರುತಿಸಿ ಈಗಾಗಲೇ ಹಲವು ಪ್ರಶಸ್ತಿ, ಸನ್ಮಾನಗಳೊಂದಿಗೆ ಪುರಸ್ಕೃತರಾಗಿದ್ದಾರೆ. ಕಳೆದ ಹಲವು ವರ್ಷಗಳಿಂದ ಸುದ್ದಿ ಬಿಡುಗಡೆ ಪತ್ರಿಕೆಯ ಅಂಕಣಕಾರರಾಗಿರುವ ಇವರು ಪತ್ರಿಕೆಯಲ್ಲಿ ಪ್ರಕಟವಾಗುವ ‘ಪ್ರತಿಭಾರಂಗ’ದ ನಿರ್ವಾಹಕರೂ ಆಗಿದ್ದು, ಈಗಾಗಲೇ ಹಲವು ಪ್ರತಿಭೆಗಳಿಗೆ ಅವಕಾಶ ಕಲ್ಪಿಸಿದ್ದಾರೆ.