ಬೋಂಬೆ ಬಂಟ್ಸ್ ಅಸೋಸಿಯೇಷನ್ ಇದರ ಮಹಿಳಾ ವಿಭಾಗದ ವತಿಯಿಂದ ಜನವರಿ 18ರಂದು ಶನಿವಾರ ಮಧ್ಯಾಹ್ನ ಗಂಟೆ 2ಕ್ಕೆ ನವಿಮುಂಬಯಿ ಜೂಹಿನಗರದಲ್ಲಿರುವ ಬಂಟ್ಸ್ ಸೆಂಟರ್ ನ ಸೌಮ್ಯಲತಾ ಸದಾನಂದ ಶೆಟ್ಟಿ ಸಭಾಗೃಹದಲ್ಲಿ ‘ಹಳದಿ ಕುಂಕುಮ’ ಕಾರ್ಯಕ್ರಮ ನಡೆಯಲಿದೆ. ಅಸೋಸಿಯೇಷನ್ ಅಧ್ಯಕ್ಷ ಸಿಎ ಸುರೇಂದ್ರ ಕೆ. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ತೇಜಾಕ್ಷಿ ಎಸ್. ಶೆಟ್ಟಿ ಅವರ ನೇತೃತ್ವದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬಂಟರ ಸಂಘದ ನವಿ ಮುಂಬಯಿ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಗೀತಾ ಎಸ್.ಶೆಟ್ಟಿ, ಸಮಾಜ ಸೇವಕಿ ನೀನಾ ಕುರ್ಕಾಲ್ ಮತ್ತು ಕನ್ನಡ ವೆಲ್ಫೇರ್ ಸೊಸೈಟಿ ಘಾಟ್ಕೋಪರ್ ಇದರ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಜಲಾ ಅಜಿತ್ ಶೆಟ್ಟಿ ಆಗಮಿಸಲಿದ್ದಾರೆ.
ಮಧ್ಯಾಹ್ನ ಗಂಟೆ 2ರಿಂದ 2.30 ರವರೆಗೆ ಭಜನೆ, 2:30 ರಿಂದ ಶ್ರೀ ಮಹಾಲಕ್ಷ್ಮೀ ಬಂಟ ಮಹಿಳಾ ಯಕ್ಷಕಲಾ ಬಳಗ ಮುಂಬಯಿ ಇವರಿಂದ ಯಕ್ಷಗುರು ದೇವಲ್ಕುಂದ ಭಾಸ್ಕರ ಶೆಟ್ಟಿಯವರ ನಿರ್ದೇಶನದಲ್ಲಿ ‘ಸೀತಾಪಹರಣ’ ಎಂಬ ಯಕ್ಷಗಾನ ತಾಳಮದ್ದಳೆಯನ್ನು ಆಯೋಜಿಸಲಾಗಿದೆ. ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕಾಗಿ ಅಸೋಸಿಯೇಷನ್ ಉಪಾಧ್ಯಕ್ಷ ಅಡ್ವೋಕೇಟ್ ಡಿ.ಕೆ. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಐಕಳ ಕಿಶೋರ್ ಕೆ. ಶೆಟ್ಟಿ, ಕೋಶಾಧಿಕಾರಿ ಸಿಎ ವಿಶ್ವನಾಥ್ ಶೆಟ್ಟಿ, ಜೊತೆ ಕಾರ್ಯದರ್ಶಿ ನ್ಯಾಯವಾದಿ ಗುಣಕರ ಡಿ ಶೆಟ್ಟಿ, ಕೋಶಾಧಿಕಾರಿ ಸಿಎ ದಿವಾಕರ್ ಶೆಟ್ಟಿ, ಮಹಿಳಾ ವಿಭಾಗದ ಉಪ ಕಾರ್ಯಾಧಕ್ಷೆ ಶಾಂತಾ ಎನ್. ಶೆಟ್ಟಿ, ಕಾರ್ಯದರ್ಶಿ ಸುಹಾನಿ ವಿ. ಶೆಟ್ಟಿ, ಕೋಶಾಧಿಕಾರಿ ಉಷಾ ಆರ್. ಶೆಟ್ಟಿ, ಜೊತೆ ಕಾರ್ಯದರ್ಶಿ ಲಲಿತಾ ಬಿ. ಶೆಟ್ಟಿ, ಜೊತೆ ಕೋಶಾಧಿಕಾರಿ ಮಾಯಾ ಎಸ್. ಆಳ್ವ, ಯುವ ವಿಭಾಗದ ಕಾರ್ಯಾಧ್ಯಕ್ಷೆ ದೃಶ್ಯ ಶೆಟ್ಟಿ ಅವರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.