ಬಂಟ್ಸ್ ಅಸೋಸಿಯೇಶನ್ ಪುಣೆ ವತಿಯಿಂದ ಸಮಾಜ ಕಲ್ಯಾಣ ಸೇವಾ ಕಾರ್ಯದ ಪ್ರಯುಕ್ತ ಪುಣೆಯ ಸಮಸ್ತ ಬಂಟ ಸಮಾಜ ಬಾಂಧವರಿಗಾಗಿ ಮಲ್ಟಿಸ್ಪೆಷಾಲಿಟಿ ಉಚಿತ ಆರೋಗ್ಯ ತಪಾಸಣ ಶಿಬಿರವು ಜನವರಿ 19ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಗುರುನಾನಕ್ ಮೆಡಿಕಲ್ ಫೌಂಡೇಶನ್ನ ಗುರುನಾನಕ್ ದರ್ಬಾರ್ ಹಾಲ್, ಹಾಲಿವುಡ್ ಗುರುದ್ವಾರ ಕ್ಯಾಂಪ್ ಪುಣೆ ಇಲ್ಲಿ ನಡೆಯಲಿದೆ. ಪುಣೆ ಬಂಟ್ಸ್ ಅಸೋಸಿಯೇಶನ್ ಅಯೋಜನೆಯಲ್ಲಿ ಗುರುನಾನಕ್ ಮೆಡಿಕಲ್ ಫೌಂಡೇಶನ್ ಸಹಯೋಗದೊಂದಿಗೆ ನಡೆಯಲಿರುವ ಈ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಸ್ತ್ರೀರೋಗ ಶಾಸ್ತ್ರ, ಮಕ್ಕಳ ರೋಗ ತಪಾಸಣೆ, ಕಣ್ಣು ಹಲ್ಲು ತಪಾಸಣೆ, ಔಷಧ ಮತ್ತು ರೋಗಶಾಸ್ತ್ರದ ಬಗ್ಗೆ ಮಾಹಿತಿ, ತುರ್ತು ರೋಗಿಗಳಿಗೆ ಉಚಿತ ಈಸಿಜಿ ಮತ್ತು ಉಚಿತ ಸಕ್ಕರೆ ತಪಾಸಣೆ ನಡೆಯಲಿದೆ.ಪುಣೆ ಬಂಟ್ಸ್ ಅಸೋಸಿಯೇಶನ್ ಅಧ್ಯಕ್ಷ ರೋಹಿತ್ ಶೆಟ್ಟಿ ನಗ್ರಿಗುತ್ತು ಮತ್ತು ಕಾರ್ಯಕಾರಿ ಸಮಿತಿ, ಮಹಿಳಾ ವಿಭಾಗ, ಯುವ ವಿಭಾಗದವರ ಆಯೋಜನೆಯಲ್ಲಿ ನಡೆಯಲಿರುವ ಶಿಬಿರವು ಬಂಟ್ಸ್ ಅಸೋಸಿಯೇಶನ್ ಉಪಾಧ್ಯಕ್ಷ ಡಾ. ಸುಧಾಕರ್ ಶೆಟ್ಟಿಯವರ ಸಂಯೋಜನೆಯಲ್ಲಿ ನಡೆಯಲಿದೆ. ಆರೋಗ್ಯ ತಪಾಸಣಾ ಶಿಬಿರದ ವೈದ್ಯಕೀಯ ಸಲಹೆಗಾರರ ಬೋರ್ಡ್ನ ಪ್ರಮುಖರಾದ ಡಾ. ಹಂಸರಾಜ್ ಶೆಟ್ಟಿ ಎಂಬಿಎ, ಡಾ.ಸಂಜಯ್ ಕುಲಕರ್ಣಿ, ಡಾ. ಸುಜಯ್ ಹೆಗ್ಡೆ, ಡಾ. ಜ್ಯೋತಿ ಶೆಟ್ಟಿ, ಡಾ. ಪ್ರವೀಣ್ ಆರ್. ಶೆಟ್ಟಿ, ಡಾ. ವಿವೇಕ್ ಹೆಗ್ಡೆ, ಡಾ. ಸಂಜಯ್ ತೆಕವಡೆಯವರ ಸಲಹೆಯೊಂದಿಗೆ ಪುಣೆಯ ಖ್ಯಾತ ವೈದ್ಯರಾದ ಡಾ. ಚಿತ್ತರಂಜನ್ ಶೆಟ್ಟಿ, ಡಾ. ಸುಧಾಕರ್ ಶೆಟ್ಟಿ, ಡಾ. ಉರ್ವಿ ಕೊಠಾರಿ, ಡಾ. ರೋಬರ್ಟ್ ಲೋಬೊ, ವಿಕಾಸ್ ಮಂತೋಲೆ, ಡಾ.ಸಮಿತಾ ಮೂಲಾನಿ, ಡಾ. ಸತ್ಯಶೀಲ ನ್ಯಾಕ್ ಆರೋಗ್ಯ ತಪಾಸಣೆ ನಡೆಸಿ ಸೂಕ್ತ ಸಲಹೆ ನೀಡಲಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ರೋಹಿತ್ ಶೆಟ್ಟಿ (9960337625), ಡಾ.ಸುಧಾಕರ್ ಶೆಟ್ಟಿ (9657616322), ದಿನೇಶ್ ಶೆಟ್ಟಿ (9823019020), ರೇಷ್ಮಾಆರ್. ಶೆಟ್ಟಿ (9881461181) ಅವರನ್ನು ಸಂಪರ್ಕಿಸಬಹುದು. ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಪುಣೆ ಬಂಟ್ಸ್ ಅಸೋಸಿಯೇಶನ್ ಅಧ್ಯಕ್ಷ ರೋಹಿತ್ ಶೆಟ್ಟಿ ನಗ್ರಿ ಗುತ್ತು, ನಿಕಟಪೂರ್ವ ಅಧ್ಯಕ್ಷ ಗಣೇಶ್ ಹೆಗ್ಡೆ ಪುಣ್ಣೂರು, ಉಪಾಧ್ಯಕ್ಷರಾದ ಡಾ. ಸುಧಾಕರ್ ಶೆಟ್ಟಿ, ಸತೀಶ್ ರೈ ಕಲ್ಲಂಗಳಗುತ್ತು, ಪ್ರಧಾನ ಕಾರ್ಯದರ್ಶಿ ದಿನೇಶ್ ಶೆಟ್ಟಿ, ಕೋಶಾಧಿಕಾರಿ ಸಿಎ ಮನೋಹರ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರೇಷ್ಮಾ ಆರ್. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಅದೀಪ್ ಶೆಟ್ಟಿ ಮತ್ತು ಸಮಿತಿಯ ಪದಾಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.