ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಜಯರಾಮ ಶೆಟ್ಟಿ ಎಸ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಹರೀಶ್ ಕಿಣಿ ಬಿ ಆಯ್ಕೆಯಾದರು. ನೂತನ ಅಧ್ಯಕ್ಷರು ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಜನವರಿ 31 ರಂದು ನಡೆಯಿತು.ಈ ಸಂದರ್ಭದಲ್ಲಿ ನಿರ್ದೇಶಕರಾದ ಚಂದ್ರಶೇಖರ ಶೆಟ್ಟಿ ಎಂ., ದಯಾನಂದ ಆರ್. ಶೆಟ್ಟಿ, ದಯಾನಂದ ಪೂಜಾರಿ ಕೆ., ಎಚ್. ಸೀತಾರಾಮ ಶೆಟ್ಟಿ, ಸವಿತಾ ಶೆಟ್ಟಿ, ಸುಜಾತಾ ಪೂಜಾರಿ, ಕೃಷ್ಣ ನಾಯ್ಕ್, ಉದಯ್ ಶೆಟ್ಟಿ, ಶಿವರಾಮ ಪ್ರದೀಪ್ ನಾಯ್ಕ್ ಉಪಸ್ಥಿತರಿದ್ದರು. ಚುನಾವಣಾ ಅಧಿಕಾರಿಯಾಗಿ ಸ್ವಾಮಿ ಕರ್ತವ್ಯ ನಿರ್ವಹಿಸಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೀರ್ತಿ ಕುಮಾರ್ ಶೆಟ್ಟಿ ವಂದಿಸಿದರು. ರೈತ ಬಂದು ಸಹಕಾರ ಒಕ್ಕೂಟದ 13 ಜನ ನಿರ್ದೇಶಕರು ಇಲ್ಲಿ ಆಯ್ಕೆಯಾಗಿದ್ದರು.