ಬಂಟ್ವಾಳ ತಾಲೂಕಿನ ಪ್ರತಿಷ್ಠಿತ ಸಹಕಾರಿ ಸಂಘಗಳಲ್ಲೊಂದಾದ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತದ ಆಡಳಿತ ಮಂಡಳಿಯ ಚುನಾವಣೆಯು ಇತ್ತೀಚೆಗೆ ನಡೆದಿದ್ದು, ಆಡಳಿತ ಮಂಡಳಿಯ ನೂತನ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯು ನಡೆದು, ಮುಂದಿನ ಐದು ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ ಪ್ರಭಾಕರ ಪ್ರಭು ಅವರು ಪುನರಾಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ಸಂದೇಶ್ ಶೆಟ್ಟಿ ಪೊಡುಂಬ ಅವರು ಆಯ್ಕೆಗೊಂಡಿದ್ದಾರೆ. ಸಂಘದ ಕಚೇರಿಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯು ನಡೆಯಿತು.
ಚುನಾವಣಾಧಿಕಾರಿಯಾಗಿದ್ದ ಮಂಗಳೂರು ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿಯ ಸೂಪರಿಡೆಂಟ್ ಎ.ಗೋಪಾಲ್ ಅವರು ಉಪಸ್ಥಿತಿಯಲ್ಲಿ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಸಂಘದ ಕಾರ್ಯನಿರ್ವಹಣಾಧಿಕಾರಿ ಆರತಿ ಶೆಟ್ಟಿ ಮತ್ತು ಸಿಬ್ಬಂದಿಗಳು ಸಹಕರಿಸಿದರು.
ಈ ಸಂಧರ್ಭದಲ್ಲಿ ನೂತನ ನಿರ್ದೇಶಕರುಗಳಾಗಿ ಆಯ್ಕೆಯಾಗಿದ್ದ ರಶ್ಮಿತ್ ಶೆಟ್ಟಿ, ಚಂದ್ರಶೇಖರ ಶೆಟ್ಟಿ, ದಿನೇಶ್ ಪೂಜಾರಿ, ಎ.ಶಿವಗೌಡ, ಸತೀಶ್ ಪೂಜಾರಿ ಅಲಕ್ಕೆ, ಪುಪ್ಪಲತಾ ಎಸ್ ಆರ್., ಮಂದಾರತಿ ಶೆಟ್ಟಿ, ವೀರಪ್ಪ ಪರವ, ಜಾರಪ್ಪ ನಾಯ್ಕ್ ಹಾಗೂ ವಿಶ್ವನಾಥ ಶೆಟ್ಟಿಗಾರ್ ಉಪಸ್ಥಿತರಿದ್ದರು.