ಘರ್ಷಣೆಗಾಗಿ ಜಾತಿ ಸಂಘಟನೆ ಇರುವುದಲ್ಲ. ನಮ್ಮ ಸಮಾಜದ ಆರ್ಥಿಕವಾಗಿ ಹಿಂದುಳಿದವರನ್ನು ಮೇಲಕ್ಕೆ ಎತ್ತುವ, ಅವರ ಕಷ್ಟ ಸುಖಗಳಲ್ಲಿ ಭಾಗಿಯಾಗುವ ಉದ್ದೇಶವನ್ನು ಹೊಂದಿದಾಗ ಮಾತ್ರ ಜಾತಿ ಸಂಘಟನೆಗೆ ಅರ್ಥ ಬರುತ್ತದೆ. ಈ ನಿಟ್ಟಿನಲ್ಲಿ ಇಂದು ದಾನಿಗಳ ನೆರವಿನಿಂದ 10 ಲಕ್ಷ ರೂಪಾಯಿ ವಿದ್ಯಾರ್ಥಿವೇತನವನ್ನು ಸಮಾಜದ ವಿದ್ಯಾರ್ಥಿಗಳಿಗೆ ನೀಡಲಾಗಿದೆ ಎಂದು ಹೆಬ್ರಿ ಬಂಟರ ಸಂಘದ ಅಧ್ಯಕ್ಷ ಸೀತಾನದಿ ವಿಠಲ ಶೆಟ್ಟಿ ಹೇಳಿದರು. ಅವರು ಹೆಬ್ರಿ ಶ್ರೀಮತಿ ಶೀಲಾ ಸುಭೋದ್ ಬಲ್ಲಾಳ ಬಂಟರ ಸಭಾಭವನದ ವಠಾರದ ಮುನಿಯಾಲು ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ವೇದಿಕೆಯಲ್ಲಿ ನಲವತ್ತರ ಸಂಭ್ರಮ ಸಮಾವೇಶದ ಸಮಾರಂಭದಲ್ಲಿ ಬಂಟ ಸಾಧಕರನ್ನು ಸನ್ಮಾನಿಸಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಹೆಬ್ರಿ ಬಂಟರ ಸಂಘದ ಗೌರವಾಧ್ಯಕ್ಷ ಮುನಿಯಾಲು ಉದಯ ಶೆಟ್ಟಿ, ಜಿ.ಎಂ ಎಜ್ಯುಕೇಶನ್ ಟ್ರಸ್ಟ್ ಇದರ ಅಧ್ಯಕ್ಷ ಪ್ರಕಾಶ್ ಚಂದ್ರ ಶೆಟ್ಟಿ, ಡಿವೈಎಸ್ ಪಿ ರತ್ನಾಕರ್ ಶೆಟ್ಟಿ, ಯು.ಎಸ್.ಕೆ. ಎಜ್ಯುಕೇಶನ್ ಟ್ರಸ್ಟ್ ನ ಅಧ್ಯಕ್ಷ ಮಾರಳಿ ಪ್ರತಾಪ್ ಹೆಗ್ಡೆ, ಮುಖ್ಯ ಯೋಜನಾಧಿಕಾರಿ ಡಾ. ಉದಯ್ ಕುಮಾರ್ ಶೆಟ್ಟಿ, ಧಾರ್ಮಿಕ ದತ್ತಿ ಇಲಾಖೆ ಸಹಾಯಕ ಆಯುಕ್ತ ಪ್ರಶಾಂತ್ ಕುಮಾರ್ ಶೆಟ್ಟಿ, ಯೂನಿಯನ್ ಬ್ಯಾಂಕ್ ಡಿಜಿಎಂ ಡಾ. ಎಚ್.ಟಿ. ವಾಸಪ್ಪ, ಉದ್ಯಮಿ ಸುಧಾಕರ್ ಶೆಟ್ಟಿ, ನಿವೃತ್ತ ಪೊಲೀಸ್ ಉಪನಿರೀಕ್ಷಕ ಮಹಾಬಲ ಶೆಟ್ಟಿ, ಬೆಂಗಳೂರು ಉಚ್ಚ ನ್ಯಾಯಾಲಯದ ವಿಶೇಷ ಅಭಿಯೋಜಕ ಕೆ. ಪ್ರಸನ್ನ ಶೆಟ್ಟಿ, ಉದ್ಯಮಿಗಳಾದ ಪಡುಕುಡೂರು ಹರೀಶ್ ಶೆಟ್ಟಿ, ಪ್ರಸಾದ್ ಶೆಟ್ಟಿ ಬೇಳಂಜೆ, ಮಹೇಶ್ ಶೆಟ್ಟಿ ಬಾದ್ಲು, ಸೀತಾನದಿ ಮಂಜುನಾಥ್ ಶೆಟ್ಟಿ, ಉದಯ್ ಕಡಂಬ, ಮಾತೃ ಸಂಘದ ನಿರ್ದೇಶಕರಾದ ಬಿ. ಕರುಣಾಕರ ಶೆಟ್ಟಿ, ಪ್ರಮೋದಾ ಆರ್ ಶೆಟ್ಟಿ, ಯುವ ಬಂಟರ ಅಧ್ಯಕ್ಷ ದಿನೇಶ್ ಶೆಟ್ಟಿ, ಸಮಾವೇಶ ಸಂಚಾಲಕರಾದ ಸಂಪತ್ ಶೆಟ್ಟಿ, ಗೀತಾ ಶೆಟ್ಟಿ, ಕೋಶಾಧಿಕಾರಿ ರವೀಂದ್ರನಾಥ ಶೆಟ್ಟಿ, ಜ್ಯೋತಿ ಕೆ. ಶೆಟ್ಟಿ ಉಪಸ್ಥಿತರಿದ್ದರು. ಕ್ರೀಡಾ ಕ್ಷೇತ್ರದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದ ನಿತ್ಯಾನಂದ ಶೆಟ್ಟಿ ಹಾಗೂ ರಾಜು ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಮಹಿಳಾ ಬಂಟರ ಸಂಘದ ಅಧ್ಯಕ್ಷೆ ಬಾನು ಪಿ. ಬಳ್ಳಾಲ್ ಸ್ವಾಗತಿಸಿ, ನಿತ್ಯಾನಂದ ಶೆಟ್ಟಿ, ಪ್ರವೀಣ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಸಂಘದ ಉಪಾಧ್ಯಕ್ಷ ಸುರೇಶ್ ಶೆಟ್ಟಿ ವಂದಿಸಿದರು. ಮಧ್ಯಾಹ್ನ ನಡೆದ ಬಂಟ ವಿದ್ಯಾರ್ಥಿಗಳಿಗೆ ನಡೆಯುವ ಪ್ರೋತ್ಸಾಹ ಧನ ವಿತರಣೆ ಸಮಾರಂಭದ ಅಧ್ಯಕ್ಷತೆಯನ್ನು ಬಂಟರ ಸಂಘದ ಉಪಾಧ್ಯಕ್ಷ ವಾದಿರಾಜ ಶೆಟ್ಟಿ ವಹಿಸಿದ್ದು, ಸಮಾರಂಭದಲ್ಲಿ ಉದ್ಯಮಿಗಳಾದ ಸೀತಾನದಿ ಕುಶಲ್ ಶೆಟ್ಟಿ, ಮಹೇಶ್ ಹೆಗ್ಡೆ, ಎಳಗೋಳಿ ಚಿಟ್ಟೆಬೆಟ್ಟು ಹರೀಶ್ ಶೆಟ್ಟಿ, ಯಶೋಧ ಶೆಟ್ಟಿ, ಧನುಷ್ ಬಿ. ಹೆಗ್ಡೆ, ದಿಲೀಪ್ ಬಳ್ಳಾಲ್, ಎಮ್. ಪ್ರಕಾಶ್ ಶೆಟ್ಟಿ, ಚಾರ ಹರೀಶ್ ಶೆಟ್ಟಿ, ಸುಧಾಕರ್ ಶೆಟ್ಟಿ, ಸುಧೀರ್ ಶೆಟ್ಟಿ, ಕೆಂಜೂರು ಆಶಿತ್ ಶೆಟ್ಟಿ, ದರ್ಶನ್ ಶೆಟ್ಟಿ, ಶೋಭಾ ಜಿ ಹೆಗ್ಡೆ ಉಪಸ್ಥಿತರಿದ್ದರು. ಸರಕಾರಿ ಶಿಕ್ಷಣ ಸಂಸ್ಥೆಗಳ ಬಂಟ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟರ ಸಂಘದ ಉಪಾಧ್ಯಕ್ಷ ಬಿ ಹರ್ಷ ಶೆಟ್ಟಿ ವಹಿಸಿದ್ದು, ಮಹೇಶ್ ಶೆಟ್ಟಿ, ಬಾಲಕೃಷ್ಣ ಶೆಟ್ಟಿ, ಎಂ ಅಪ್ಪು ಶೆಟ್ಟಿ, ಮಹೇಶ್ ಶೆಟ್ಟಿ ಬಾದ್ಲು, ಮುನಿಯಾಲು ಉಮೇಶ್ ಶೆಟ್ಟಿ, ಬಂಟರ ಯಾನೆ ನಾಡವರ ಸಂಘದ ಪ್ರಮುಖರಾದ ಸೀತಾನದಿ ವಿಠಲ್ ಶೆಟ್ಟಿ, ವಾದಿರಾಜ ಶೆಟ್ಟಿ, ಭಾನು ಪಿ. ಬಳ್ಳಾಲ್, ಆಶಾ ಬಿ. ಶೆಟ್ಟಿ, ನವೀನ್ ಕೆ. ಅಡ್ಯಂತಾಯ, ಕೆ. ಕೃಷ್ಣ ಶೆಟ್ಟಿ, ಪ್ರಕಾಶ್ ಶೆಟ್ಟಿ, ಸಂಪತ್ ಕುಮಾರ್ ಶೆಟ್ಟಿ, ಸುಕೇಶ್ ಶೆಟ್ಟಿ, ಪ್ರಸಾದ್ ರೈ, ಸಂದೀಪ್ ಎನ್. ಶೆಟ್ಟಿ ಮಹಾಬಲ ಶೆಟ್ಟಿ ಉಪಸ್ಥಿತರಿದ್ದರು. ಪ್ರಸಾದ್ ಶೆಟ್ಟಿ, ಶಶಿಧರ್ ಶೆಟ್ಟಿ, ವಿಜಯಕುಮಾರ್ ಶೆಟ್ಟಿ ನಿರೂಪಿಸಿದರು.