ಪುತ್ತೂರು ತಾಲೂಕು ಯುವ ಬಂಟರ ಸಂಘದ ಸಾರಥ್ಯದಲ್ಲಿ ಸಹಕಾರಿ ಧುರೀಣ ದಿ. ಜೀವನ್ ಭಂಡಾರಿ ಸಿದ್ಯಾಳ ಸ್ಮರಣಾರ್ಥ ಫೆಬ್ರವರಿ 22 ಮತ್ತು 23ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿರುವ ಪುತ್ತೂರ್ದ ಬಂಟ ಜವನೆರೆ ಗೊಬ್ಬು ಬಂಟ್ಸ್ ಪ್ರೀಮಿಯರ್ ಲೀಗ್ – 2025, ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟದ ಆಮಂತ್ರಣ ಪತ್ರ ಬಿಡುಗಡೆ ಫೆಬ್ರವರಿ 15ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜರಗಿತು. ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷ ಹರ್ಷ ಕುಮಾರ್ ರೈ ಮಾಡಾವುರವರು ಸ್ವಾಗತಿಸಿ, ಕಾರ್ಯಕ್ರಮದ ಉದ್ದೇಶವನ್ನು ತಿಳಿಸಿದರು.ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಬಂಟರ ಯಾನೆ ನಾಡವರ ಮಾತೃ ಸಂಘದ ಸಂಚಾಲಕ ಕುಂಬ್ರ ದುರ್ಗಾಪ್ರಸಾದ್ ರೈ, ಸಹ ಸಂಚಾಲಕ ಸಾಜ ರಾಧಾಕೃಷ್ಣ ಆಳ್ವ, ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ ಮನವಳಿಕೆ, ಕೋಶಾಧಿಕಾರಿ ಸಂತೋಷ್ ಶೆಟ್ಟಿ ಸಾಜ, ಉಪಾಧ್ಯಕ್ಷ ರಮೇಶ್ ರೈ ಡಿಂಬ್ರಿ, ದಯಾನಂದ ರೈ ಕೊರ್ಮಂಡ, ಗಣೇಶ್ ಶೆಟ್ಟಿ ನೆಲ್ಲಿಕಟ್ಟೆ, ರವಿಪ್ರಸಾದ್ ಶೆಟ್ಟಿ ಬನ್ನೂರು, ಶಶಿರಾಜ್ ರೈ ಮುಂಡಾಳಗುತ್ತು, ಕೃಷ್ಣಪ್ರಸಾದ್ ಆಳ್ವ ಉಪ್ಪಳ್ಳಿಗೆ, ಜಗಜೀವನ್ ದಾಸ್ ರೈ ಚಿಲ್ಮೆತ್ತಾರು, ಮೋಹನ್ ರೈ ನರಿಮೊಗರು, ತಾಲೂಕು ಯುವ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ರಂಜಿನಿ ಶೆಟ್ಟಿ, ಕ್ರೀಡಾ ಸಂಚಾಲಕ ಕಾರ್ತಿಕ್ ರೈ, ತಾಲೂಕು ಮಹಿಳಾ ಬಂಟರ ಸಂಘದ ಗೌರವಾಧ್ಯಕ್ಷೆಯಾಗಿರುವ ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್, ಅಧ್ಯಕ್ಷೆ ಗೀತಾ ಮೋಹನ್ ರೈ, ನಿಕಟ ಪೂರ್ವ ಅಧ್ಯಕ್ಷೆ ಸಬಿತಾ ಭಂಡಾರಿ, ಪ್ರಧಾನ ಕಾರ್ಯದರ್ಶಿ ಕುಸುಮಾ ಪಿ. ಶೆಟ್ಟಿ, ಕೋಶಾಧಿಕಾರಿ ಅರುಣಾ ರೈ ಹಾಗೂ ಯುವ ಬಂಟರ, ಬಂಟರ ಸಂಘ, ಮಹಿಳಾ ಹಾಗೂ ವಿದ್ಯಾರ್ಥಿ ಬಂಟರ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.