ಬೋಂಬೆ ಬಂಟ್ಸ್ ಅಸೋಸಿಯೇಷನ್ ನ 41ನೇ ವಾರ್ಷಿಕ ಮಹಾಸಭೆಯು ಮಾರ್ಚ್ 9ರಂದು ಬೆಳಿಗ್ಗೆ ನವಿ ಮುಂಬಯಿಯ ಜೂಯಿ ನಗರದ ಬಂಟ್ಸ್ ಸೆಂಟರ್ ನ ಶಶಿಕಲಾ ಮನಮೋಹನ್ ಶೆಟ್ಟಿ ಕಾಂಪ್ಲೆಕ್ಸ್ ನ ಶ್ರೀಮತಿ ಸೌಮ್ಯ ಲತಾ ಸದಾನಂದ ಶೆಟ್ಟಿ ಆಡಿಟೋರಿಯಂ ನಲ್ಲಿ ಅಧ್ಯಕ್ಷರಾದ ಸಿಎ ಸುರೇಂದ್ರ ಕೆ. ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ವಾರ್ಷಿಕ ಮಹಾಸಭೆಯಲ್ಲಿ ಅಸೋಸಿಯೇಷನ್ ನ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದ ನ್ಯಾಯವಾದಿ ಡಿ.ಕೆ ಶೆಟ್ಟಿಯವರು ಮುಂದಿನ ಕಾಲಾವಧಿಗೆ ಅಧ್ಯಕ್ಷರಾಗಿ ಸೇವೆ ಮಾಡಲಿದ್ದಾರೆ ಎಂದು ಘೋಷಿಸಲಾಯಿತು.ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ನ್ಯಾಯವಾದಿ ಡಿ.ಕೆ ಶೆಟ್ಟಿ ಅವರನ್ನು ನಿರ್ಗಮನ ಅಧ್ಯಕ್ಷ ಸಿಎ ಸುರೇಂದ್ರ ಕೆ ಶೆಟ್ಟಿ ಹೂಗುಚ್ಚ ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಬಾಂಬೆ ಬಂಟ್ಸ್ ಅಸೋಶಿಯೇಷನ್ ನ ಗೌರವ ಪ್ರಧಾನ ಕಾರ್ಯದರ್ಶಿ ಐಕಳ ಕಿಶೋರ್ ಕೆ. ಶೆಟ್ಟಿ, ಗೌರವ ಕೋಶಾಧಿಕಾರಿ ಸಿಎ ವಿಶ್ವನಾಥ ಶೆಟ್ಟಿ, ಜೊತೆ ಕಾರ್ಯದರ್ಶಿ ನ್ಯಾಯವಾದಿ ಗುಣಕರ ಡಿ. ಶೆಟ್ಟಿ, ಜೊತೆ ಕೋಶಾಧಿಕಾರಿ ಸಿಎ ದಿವಾಕರ್ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ತೇಜಾಕ್ಷಿ ಎಸ್. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷೆ ದೃಶ್ಯಾ ಕೆ. ಶೆಟ್ಟಿ ಉಪಸ್ಥಿತರಿದ್ದರು.
