ಪ್ರತಿಷ್ಠಿತ ಪುಣೆ ಬಂಟರ ಸಂಘದ 2025 – 2027 ರ ಅವಧಿಗೆ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆಯಾಗಿ ಶಮ್ಮಿ ಅಜಿತ್ ಹೆಗ್ಡೆಯವರು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಏಪ್ರಿಲ್ 14 ರಂದು ಸಂಘದ ಓಣಿಮಜಲು ಜಗನ್ನಾಥ ಶೆಟ್ಟಿ ಸಾಂಸ್ಕೃತಿಕ ಬಂಟರ ಭವನದಲ್ಲಿ ನಡೆದ ವಿಶೇಷ ಮಹಾಸಭೆಯಲ್ಲಿ ಈ ಆಯ್ಕೆ ನಡೆದಿದ್ದು, ಎರಡು ವರ್ಷಗಳಿಗಾಗಿ ಮಹಿಳಾ ವಿಭಾಗದ ನೂತನ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು.ಶಮ್ಮಿಅಜಿತ್ ಹೆಗ್ಡೆಯವರು ಪುಣೆ ಬಂಟರ ಸಂಘದ ಮಹಿಳಾ ವಿಭಾಗದಲ್ಲಿ ಹಲವಾರು ವರ್ಷಗಳಿಂದ ಸಕ್ರಿಯವಾಗಿ ಗುರುತಿಸಿಕೊಂಡು ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಸಮಾಜದ ಮಹಿಳೆಯರ ಅಪಾರವಾಗಿ ಶ್ರಮಿಸಿದ್ದಾರೆ. ಈ ಹಿಂದೆ ಸಮಿತಿಯ ವಿವಿಧ ವಿಭಾಗಗಳಲ್ಲಿ ಗಣನೀಯ ಸೇವೆಯನ್ನು ಸಲ್ಲಿಸಿದ್ದಾರೆ.
