ಪುಣೆ ಬಂಟರ ಸಂಘದ ಸಮಿತಿಯ 2025-2027 ರ ಅವಧಿಗೆ ನೂತನ ಅಧ್ಯಕ್ಷರಾಗಿ ಕೆಂಜಾರುಗುತ್ತು ಅಜಿತ್ ಹೆಗ್ಡೆ ಹಾಗೂ ಸಂಘದ ನೂತನ ಉಪಾಧ್ಯಕ್ಷರಾಗಿ ವಿಶ್ವನಾಥ ಶೆಟ್ಟಿ ಶೀತಲ್ ಹಾಗೂ ರಾಮಕೃಷ್ಣ ಶೆಟ್ಟಿ ಸರ್ವಾನುಮತದಿಂದ ಆಯ್ಕೆಗೊಂಡಿದ್ದಾರೆ. ಏಪ್ರಿಲ್ 14 ರಂದು ಓಣಿಮಜಲು ಜಗನ್ನಾಥ ಶೆಟ್ಟಿ ಸಾಂಸ್ಕೃತಿಕ ಬಂಟರ ಭವನದಲ್ಲಿ ಪುಣೆ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಬಾಳಿಕೆಯವರ ಅಧ್ಯಕ್ಷತೆಯಲ್ಲಿ ನಡೆದ ಸಂಘದ ವಿಶೇಷ ಮಹಾಸಭೆಯಲ್ಲಿ ಸಂಘದ ನೂತನ ಕಾರ್ಯಕಾರಿ ಸಮಿತಿಯ ಆಯ್ಕೆ ಹಾಗೂ ದಕ್ಷಿಣ, ಉತ್ತರ, ಪೂರ್ವ ಹಾಗೂ ಪಶ್ಚಿಮ ಪ್ರಾದೇಶಿಕ ಸಮಿತಿಗಳ ಕಾರ್ಯಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು.ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಸುಧೀರ್ ಶೆಟ್ಟಿ ಕಣಂಜಾರು, ಗೌರವ ಕೋಶಾಧಿಕಾರಿಯಾಗಿ ಪ್ರಶಾಂತ್ ಶೆಟ್ಟಿ ಹೆರ್ಡೆಬೀಡು, ಜೊತೆ ಕಾರ್ಯದರ್ಶಿಯಾಗಿ ಚಂದ್ರಶೇಖರ ಶೆಟ್ಟಿ ನಿಟ್ಟೆ ಆಯ್ಕೆಗೊಂಡಿದ್ದಾರೆ.
