ಕೇಂದ್ರ ಲೋಕಸೇವಾ ಆಯೋಗವು (UPSC) 2024 ರಲ್ಲಿ ನಡೆಸಿದ ನಾಗರೀಕ ಸೇವಾ ಪರೀಕ್ಷೆಯಲ್ಲಿ ಯೂನಿವರ್ಸಲ್ ಕೋಚಿಂಗ್ ಸೆಂಟರ್ ನಲ್ಲಿ ತರಬೇತಿ ಪಡೆದ 10 ಅಭ್ಯರ್ಥಿಗಳು ತೇರ್ಗಡೆಗೊಂಡಿದ್ದಾರೆ. ರಾಜ್ಯದಲ್ಲಿ ಅತೀ ಹೆಚ್ಚಿನ ಸಂಖ್ಯೆಯ IAS/IPS/IFS ಹಾಗೂ ಇತರೆ ವರ್ಗದ 8025 ಕ್ಕೂ ಅಧಿಕ ಅಧಿಕಾರಿಗಳನ್ನು ಕಳೆದ 24 ವರ್ಷಗಳಲ್ಲಿ ಯೂನಿವರ್ಸಲ್ ಸಂಸ್ಥೆ ನೀಡಿದೆ.
ಉತ್ತೀರ್ಣರಾದ ಎಲ್ಲಾ ಅಭ್ಯರ್ಥಿಗಳಿಗೆ ಯೂನಿವರ್ಸಲ್ ಕೋಚಿಂಗ್ ಸೆಂಟರ್ ನ ಆಡಳಿತ ನಿರ್ದೇಶಕ ಆರ್ ಉಪೇಂದ್ರ ಶೆಟ್ಟಿಯವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
