ಬಂಟರ ಸಂಘ ಸಜೀಪ ವಲಯ ಇದರ ಆಶ್ರಯದಲ್ಲಿ ನಡೆದ ವಲಯ ಮಟ್ಟದ ಕ್ರೀಡಾಕೂಟ, ವಲಯದ ಸಾಧಕರಿಗೆ ಗೌರವ ಸನ್ಮಾನ ಮತ್ತು ವಲಯ ಬಂಟರ ಸಮ್ಮಿಲನ ಕಾರ್ಯಕ್ರಮವು ಏಪ್ರಿಲ್ 26 ರಂದು ಸಂಕೇಶದಲ್ಲಿ ನಡೆಯಿತು. ರಾತ್ರಿ ನಡೆದ ಬಂಟರ ಸಮ್ಮಿಲನ ಕಾರ್ಯಕ್ರಮವು ವಿವಿಧ ರೀತಿಯ ವಿನೋದ ಕಾರ್ಯಕ್ರಮಗಳು ಮತ್ತು ನೃತ್ಯ ಪ್ರದರ್ಶನಗಳೊಂದಿಗೆ ನಡೆಯಿತು. ನಂತರ ನಡೆದ ಸಭಾ ಕಾರ್ಯಕ್ರಮವು ಸುರೇಶ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಜರಗಿತು. ಸಮಾಜದ ಹಿರಿಯರಾದ ಅಖಿಲ ಭಾರತ ತುಳು ಒಕ್ಕೂಟದ ಅಧ್ಯಕ್ಷರಾಗಿ ಮರು ಆಯ್ಕೆಯಾದ ಎ.ಸಿ ಭಂಡಾರಿ, ನಂದಾವರ ಶ್ರೀ ವಿನಾಯಕ ಶಂಕರ ನಾರಾಯಣ ದುರ್ಗಾಂಬಾ ಕ್ಷೇತ್ರದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಪ್ರಭಾಕರ ಶೆಟ್ಟಿ ಕಾಂತಾಡಿಗುತ್ತು, ವಿವಿಧ ಸಂಸ್ಥೆಗಳಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಸದಸ್ಯರಾಗಿ ಆಯ್ಕೆಯಾದ ಮಹನೀಯರು ಹಾಗೂ ಶೈಕ್ಷಣಿಕ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಮಾಜದ ವಿದ್ಯಾರ್ಥಿಗಳು ಸೇರಿದಂತೆ ಹದಿನೆಂಟು ಸಾಧಕರಿಗೆ ಗಣ್ಯರ ಉಪಸ್ಥಿತಿಯಲ್ಲಿ ಗೌರವ ಸನ್ಮಾನ ಮಾಡಲಾಯಿತು. ವಿವಿಧ ಕ್ರೀಡಾ ಪಂದ್ಯಾಟಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಸಭಾ ವೇದಿಕೆಯಲ್ಲಿ ಬಂಟ್ವಾಳ ಬಂಟರ ಸಂಘದ ಅಧ್ಯಕ್ಷರಾದ ಚಂದ್ರಹಾಸ ಶೆಟ್ಟಿ ರಂಗೋಲಿ, ಬಂಟ್ವಾಳ ಯುವ ಬಂಟರ ಸಂಘದ ಅಧ್ಯಕ್ಷರಾದ ನಿಶಾನ್ ಆಳ್ವ, ಬಂಟ್ವಾಳ ಬಂಟರ ಸಂಘದ ಮಹಿಳಾ ವಿಭಾಗದ ಅಧ್ಯಕ್ಷೆ ಶ್ರೀಮತಿ ರಮಾ. ಎಸ್. ಭಂಡಾರಿ, ಬಂಟ್ವಾಳ ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷ ಉದ್ಯಮಿಗಳಾದ ವಿವೇಕ್ ಶೆಟ್ಟಿ ನಗ್ರಿಗುತ್ತು, ಉದ್ಯಮಿ ಸಮಾಜಸೇವಕ ಸಂತೋಷ್ ಶೆಟ್ಟಿ ದಲಂದಿಲ, ಪುಣೆ ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ರೋಹಿತ್ ಶೆಟ್ಟಿ ನಗ್ರಿಗುತ್ತು, ಜಯರಾಮ ಹೆಗ್ಡೆ ಕುಡುವಪಾಲು, ಸಜೀಪ ವಲಯ ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಶ್ರೀಕಾಂತ್ ಶೆಟ್ಟಿ ಸಂಕೇಶ ಮತ್ತು ಜಯರಾಮ ಅಡ್ಯಂತಾಯ ಮೊದಲಾದ ಗಣ್ಯರು ಉಪಸ್ಥಿತರಿದ್ದರು. ರಾಧಾಕೃಷ್ಣ ಆಳ್ವ ಸ್ವಾಗತಿಸಿ, ಶಿವಪ್ರಸಾದ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು ಮತ್ತು ಮನೋಜ್ ಆಳ್ವ ದಲಂದಿಲ ಧನ್ಯವಾದ ಸಮರ್ಪಿಸಿದರು.