ಆರ್ಯಾಡಿ ಶ್ರೀ ಜನಾರ್ಧನ ದೇವಸ್ಥಾನ ಪಾಂಗಾಳ ಇದರ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಲುವಾಗಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಎಂ.ಆರ್.ಜಿ ಗ್ರೂಪ್ ನ ಸಿಎಂಡಿ ಡಾ| ಕೆ ಪ್ರಕಾಶ್ ಶೆಟ್ಟಿಯವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಬಾಲಕೃಷ್ಣ ಟಿ ಶೆಟ್ಟಿ, ವಿದ್ವಾನ್ ಶ್ರೀ ಸುಬ್ರಹ್ಮಣ್ಯ ಅವನಾಧಿ, ಉದ್ಯಮಿಗಳಾದ ಬಾಲಾಜಿ ಯೋಗಿಶ್ ಶೆಟ್ಟಿ, ಕಟ್ಟಡ ಸಮಿತಿ ಕಾರ್ಯಾಧ್ಯಕ್ಷರಾದ ಗೋವಿಂದ ಶೆಟ್ಟಿ ಉಪಸ್ಥಿತರಿದ್ದರು.
